ಬಳ್ಳಾರಿ,ಮೇ 21 ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್ಗಳ ನೇಮಕಕ್ಕಾಗಿ ಜೂನ್ 04 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅರ್ಹತೆ:
ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇರಪ್ರತಿನಿಧಿಗಳು:
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.
ಫೀಲ್ಡ್ಆಫೀಸರ್:
ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- (ಐದು ಸಾವಿರ ಮಾತ್ರ) ಗಳನ್ನು ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಡೆವಲಪ್ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ, ಹತ್ತಿರದ ಅಂಚೆ ಕಚೇರಿ ಅಥವಾ ದೂ.08392-266037 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.