ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು(ಸೋಮವಾರ) ಗುಣಮುಖರಾಗಿ ಡಿಸ್ಚಾರ್ಜ್ ಆದರು. ಪದ್ಮನಾಭ ನಗರದ ತಮ್ಮ ಮನೆಗೆ ಅವರು ಮರಳಿದ್ದಾರೆ. ದೇವೇಗೌಡರಿಗೆ ಹದಿನೈದು ದಿನ ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದು, ಅಭಿಮಾನಿಗಳು, ಕಾರ್ಯಕರ್ತರು ಸಹಕರಿಸಲು ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.


