ಶಾಮನೂರು ಶಿವಶಂಕರಪ್ಪ ಆಸ್ಪತ್ರೆಯಿಂದ ಬಿಡುಗಡೆ

Ravi Talawar
ಶಾಮನೂರು ಶಿವಶಂಕರಪ್ಪ ಆಸ್ಪತ್ರೆಯಿಂದ ಬಿಡುಗಡೆ
WhatsApp Group Join Now
Telegram Group Join Now

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇಶದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ದಾವಣಗೆರೆಯ ಕಾಂಗ್ರೆಸ್ ಶಾಸಕ 92-ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪ ಅವರು, ಚಿಕಿತ್ಸೆ ಬಳಿಕ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೆಮ್ಮು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ದಾವಣಗೆರೆಯ ಎಸ್‌ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಹೇಳಲಾಗಿದ್ದು, ಇದೀಗ ಮನೆಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಕುರಿತು ವದಂತಿಗಳು ಹರಿದಾಡಲು ಆರಂಭವಾಗಿದ್ದು, ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಹೇಳಿಕೆ ನೀಡಿ, ಸ್ಪಷ್ಟನೆ ನೀಡಿದೆ.

ನಮ್ಮ ಅಧ್ಯಕ್ಷರು ಆಸ್ಪತ್ರೆಯಲ್ಲಿದ್ದಾರೆ, ಆದರೆ ಅವರ ಆರೋಗ್ಯದ ನಿಯತಾಂಕಗಳು ಉತ್ತಮವಾಗಿವೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಹೇಳಿದೆ.

WhatsApp Group Join Now
Telegram Group Join Now
Share This Article