ಬೆಂಗಳೂರು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
*ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ*
ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು. ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ಆಡಳಿತ ಮಂಡಳಿಯವರಿಗೆ ಸಚಿವರು ಸೂಚಿಸಿದರು.
*ಗೃಹ ಕಾರ್ಮಿಕರ ಸಮಸ್ಯೆ ಚರ್ಚೆ*
ಕರ್ನಾಟಕ ಗೃಹ ಕಾರ್ಮಿಕರ ವೇದಿಕೆ ಬೆಂಗಳೂರು ಇವರ ಮನವಿ ಮೇರೆಗೆ ಸಚಿವ ಲಾಡ್ ಅವರು, ಗೃಹ ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.
*ಎಂವಿ ಫೋಟೋ ಒಲ್ಟಾಯಿಕ್ ಪವರ್ ಕಾರ್ಮಿಕರ ಸಮಸ್ಯೆ ಚರ್ಚೆ*
ಹಾಗೆಯೇ ಎಂವಿ ಫೋಟೋ ಒಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಎಲ್ಲಾ ಸಭೆಗಳಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಗೃಹ ಕಾರ್ಮಿಕ ವೇದಿಕೆಯ ಪ್ರಮುಖರು, ಕಂಪನಿಯ ಆಡಳಿತ ಮಂಡಳಿ ಮುಖ್ಯಸ್ಥರು, ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು