ಸಂವಿಧಾನ ಹತ್ಯೆ ದಿನ ಪ್ರಶ್ನಿಸಿದ ಅರ್ಜಿ ವಜಾ

Ravi Talawar
ಸಂವಿಧಾನ ಹತ್ಯೆ ದಿನ ಪ್ರಶ್ನಿಸಿದ ಅರ್ಜಿ ವಜಾ
WhatsApp Group Join Now
Telegram Group Join Now

ನವದೆಹಲಿ: ಪ್ರತಿವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿನವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಕೇಂದ್ರದ ಅಧಿಸೂಚನೆಯು ಯಾವುದೇ ರೀತಿಯಲ್ಲಿಯೂ ಸಂವಿಧಾನಕ್ಕೆ ಅಪಮಾನ ಮಾಡುವ ರೀತಿಯಲ್ಲಿ ಇಲ್ಲ ಹಾಗೂ ಈ ವಿಷಯವು ರಾಷ್ಟ್ರಕ್ಕೆ ಅಪಮಾನದ ವರ್ಗದಲ್ಲಿಯೂ ಬರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜೂನ್ 25, 1975 ರಂದು ಆಗಿನ ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ಗೌರವ ಸಲ್ಲಿಸಲು ಜೂನ್ 25 ರಂದು ಸಂವಿಧಾನ ಹತ್ಯೆ ದಿನವಾಗಿ ಆಚರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿವೆ. ಸದ್ಯ ಈ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ಶುಕ್ರವಾರ ವಜಾಗೊಳಿಸಲಾಗಿದೆ.

WhatsApp Group Join Now
Telegram Group Join Now
Share This Article