ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ

Ravi Talawar
ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ
WhatsApp Group Join Now
Telegram Group Join Now
 *ಬೆಳಗಾವಿ* : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇಂದು ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೇಮಕಾತಿಯ ಆದೇಶ ಪತ್ರಗಳನ್ನು ವಿತರಿಸಿದರು.
 ಜೊತೆಗೆ ಸಹಾಯಕಿ‌ ಹುದ್ದೆಯಿಂದ ಕಾರ್ಯಕರ್ತೆ ಹುದ್ದೆಗೆ ಪದೋನ್ನತಿ ಹೊಂದಿದ ಹಾಗೂ ಅನುಕಂಪ ಆಧಾರದ ಮೇಲೆ ಆಯ್ಕೆಗೊಂಡವರಿಗೂ ಆದೇಶ ಪತ್ರಗಳನ್ನು ವಿತರಿಸಿ, ಶುಭ ಕೋರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗಿದೆ. ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾದೆ, ಅರ್ಹರಿಗಷ್ಟೇ ನೌಕರಿ ನೀಡಲಾಗಿದ್ದು, ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ 35 ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅದೇಶ  ಪತ್ರ ನೀಡಲಾಗಿದ್ದು, ಅನುಕಂಪದ ಆಧಾರದ ಮೇಲೆ 3 ಮಂದಿಗೆ ನೌಕರಿ ನೀಡಲಾಗಿದೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ ಶೀಘ್ರವೇ ರಾಜ್ಯಾದ್ಯಂತ ವಿಸ್ತರಗೊಳ್ಳಲಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳು ಅನುದಾನ ನೀಡಲಿದ್ದು, ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.
ಈ ವೇಳೆ ಜಿಲ್ಲೆಯ ಉಪ ನಿರ್ದೇಶಕರಾದ ನಾಗರಾಜ್, ಸಿಡಿಪಿಓ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article