ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ :  ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ 

Sandeep Malannavar
ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ :  ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ 
WhatsApp Group Join Now
Telegram Group Join Now

ಬಳ್ಳಾರಿ,ಜ.22 – ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕಪಡೆ’ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಅಕ್ಕ ಪಡೆ’ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳಿಗಿರುವ ಹಕ್ಕುಗಳು, ಕಾನೂನುಗಳ ಅರಿವು ಮೂಡಿಸುವುದು ಮತ್ತು ಅವು ಉಲ್ಲಂಘನೆಯಾದಲ್ಲಿ ಅವರು ನ್ಯಾಯ ಪಡೆಯಲು ಇರುವ ವಿಧಾನಗಳ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.


ಶಿಕ್ಷಣದ ಬುನಾದಿ ಆರಂಭವಾಗುವುದು ಮನೆಯಿಂದ. ಮನೆಯಲ್ಲಿಯೇ ಪೋಕ್ಸೋ, ಬಾಲ್ಯವಿವಾಹ ಸೇರಿದಂತೆ ಅನಿಷ್ಟ ಪದ್ಧತಿಗಳ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಅಕ್ಕಪಡೆ ಯೋಜನೆಯು ಸಾಕಾರಗೊಳ್ಳಬೇಕು ಎಂದು ಆಶಿಸಿದ ಅವರು, ಇದಕ್ಕೆ ಬೇಕಾದ ಪೂರಕ ಸಹಕಾರ ಜಿಲ್ಲಾಡಳಿತ ನೀಡಲಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ ಪೆನ್ನೇಕರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ಸಹಾಯ, ಕಾನೂನು ಜಾಗೃತಿ ಮತ್ತು ಸಲಹೆ ನೀಡುವುದು ಅಕ್ಕಪಡೆ ಯೋಜನೆಯ ಕಾರ್ಯವಾಗಿದೆ. ಇದರ ಮೇಲ್ವಿಚಾರಣೆಗಾಗಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ವರದಿಯ ಪರಿಶೀಲನೆ ನಡೆಸಲಾಗುವುದು. ಇದರಿಂದ ಇನ್ನು ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಅಕ್ಕ ಎಂದರೆ ಒಬ್ಬ ಸ್ತಿçÃ, ತಾಯಿ, ಅಕ್ಕ, ಮಗಳು ಎಲ್ಲವೂ. ಮಹಿಳೆಯರ ಸುರಕ್ಷತೆ – ಸಮಾಜದ ಜವಾಬ್ದಾರಿ. ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಕೌಟುಂಬಿಕ ಹಿಂಸೆ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಮಹಿಳಾ ಕಳ್ಳಸಾಗಣೆ ಸೇರಿದಂತೆ ಸಾಮಾಜಿಕ ಕೆಡುಕುಗಳನ್ನು ತಡೆಯಲು ಅಕ್ಕ ಪಡೆ ಒಂದು ಸಮುದಾಯ ಆಧಾರಿತ ರಕ್ಷಣಾ ಪಡೆಯಾಗಿದೆ ಎಂದರು.
ರಸ್ತೆ ಅಪಘಾತಗಳಿಂದಾಗಿ ಪ್ರತಿ ವರ್ಷ ಲಕ್ಷಾಂತರ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳ ಅರಿವು, ರಸ್ತೆಗಳಲ್ಲಿ ಸುರಕ್ಷಿತ ಸಂಚಾರ ಕುರಿತು ಜಾಗೃತಿ ಹೊಂದಬೇಕು. ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸಲು ಮತ್ತು  ರಸ್ತೆಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಜ.30 ರ ವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಮಾತನಾಡಿ, ಅಪರಾಧ ನಡೆಯುವುದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಬಹಳ ಮುಖ್ಯ. ಹಾಗಾಗಿ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಪೋಕ್ಸೋ, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ, ಅಪ್ರಾಪ್ತ ಬಾಲಗರ್ಭಿಣಿ ಪ್ರಕರಣಗಳಿಗೆ ಕಡಿವಾಣ ಹಾಕಬೇಕು. ಈ ಕುರಿತು ಪ್ರಕರಣ ಹೆಚ್ಚು ಕಂಡುಬರುವ ತಾಲ್ಲೂಕುಗಳಲ್ಲಿ ಜಾಗೃತಿ ನೀಡಬೇಕು. ಇದಕ್ಕೆ ಗಸ್ತು ಪಡೆ ನಡೆಸಬೇಕು. ಅಕ್ಕಪಡೆ ಯೋಜನೆಯು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಎಲ್ಲಾ ಇಲಾಖೆಗಳ ಸಹಕಾರವೂ ಅಗತ್ಯವಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಮಹಿಳಾ ಸುರಕ್ಷತೆ ಮತ್ತು ರಕ್ಷಣೆಗಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿ ತರಲಾಯಿತು. ಕಳೆದ ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಈ ಉಪಕ್ರಮವು ಪೊಲೀಸ್, ಗೃಹ ರಕ್ಷಕ ಸಿಬ್ಬಂದಿ ಮತ್ತು ತರಬೇತಿ ಪಡೆದ ಎನ್‌ಎಸ್‌ಸಿ ಕೆಡೆಟ್‌ಗಳ ತಂಡಗಳನ್ನು ಒಳಗೊಂಡಿದ್ದು, ನಾಲ್ಕು ಮಹಿಳಾ ಸಿಬ್ಬಂದಿ ಒಳಗೊಂಡ ವಾಹನ ಸಾರ್ವಜನಿಕ ಸ್ಥಳಗಳಲ್ಲಿ ಪಾಳಿ ವೇಳೆಯಲ್ಲಿ ಗಸ್ತು ತಿರುಗುತ್ತದೆ ಎಂದರು.
ಸಮುದಾಯಗಳಲ್ಲಿ ಕೌಟುಂಬಿಕ ಹಿಂಸೆ, ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಮಹಿಳಾ ಕಳ್ಳಸಾಗಾಣೆ ಸೇರಿದಂತೆ ಇತರೆ ಅಪರಾಧ ಚಟುವಟಿಕೆ ಕಂಡುಬAದಲ್ಲಿ ತುರ್ತು ಸಹಾಯವಾಣಿ-112, ಮಹಿಳಾ ಸಹಾಯವಾಣಿ-181 ಮತ್ತು ಮಕ್ಕಳ ಸಹಾಯವಾಣಿ-1098 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.
ಮಕ್ಕಳ ವಿಶೇಷ ಘಟಕದ ನೋಡೆಲ್ ಅಧಿಕಾರಿಯೂ ಆದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ ರವಿ ಕುಮಾರ್ ಅವರು ಗಣ್ಯರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ‘ಅಕ್ಕಪಡೆ’ ಯೋಜನೆಯ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಾಗೂ ‘ಅಕ್ಕಪಡೆ’ ಗಸ್ತು ವಾಹನಕ್ಕೆ ಚಾಲನೆ ನೀಡಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್.ಎನ್., ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆAಟ್ ಶೇಕ್ ಸಾಬ್, ಪದವಿ ಪೂರ್ವ ಶಿಕ್ಷಣಾ ಇಲಾಖೆಯ ಉಪನಿರ್ದೇಶಕ ಲಕ್ಷö್ಮಣ್ ಹಳ್ಳದಮನೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ.ಕೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ, ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ಉಪ ನೀರಿಕ್ಷಕ ರಮೇಶ್ ಕುಲಕರ್ಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘ-ಸAಸ್ಥೆಗಳ  ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article