ಬಳ್ಳಾರಿ,ನ.12: ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪ್ರಕ್ರಿಯೆಯು ನ.13 ರಿಂದ ಆರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೇನಾ ಭರ್ತಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ನಗರದ ಜಿಲ್ಲಾ ಕ್ರೀಡಾಂಗಣ, ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದ ಅವರು, ವಸತಿ ಸೌಕರ್ಯ ಬಗ್ಗೆ ಚರ್ಚಿಸಿದರು.ಬಳಿಕ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿಯ ಪ್ರಕ್ರಿಯೆ ಬಗ್ಗೆ ಸೇನಾ ಅಧಿಕಾರಿ ಆರ್‌ಓ ಮೇಜರ್ ಕಪಿಲ್.ಕೆ ಸೇರಿದಂತೆ ಇನ್ನಿತರ ಸೇನಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ಸೇನಾ ನೇಮಕಾತಿ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಇನ್ನೀತರರು ಹಾಜರಿದ್ದರು.


