ನರೇಂದ್ರ, ಕುರಬಗಟ್ಟಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ; ವಿವಿಧ ಯೋಜನೆಗಳ ಪರಿಶೀಲನೆ

Ravi Talawar
ನರೇಂದ್ರ, ಕುರಬಗಟ್ಟಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ; ವಿವಿಧ ಯೋಜನೆಗಳ ಪರಿಶೀಲನೆ
WhatsApp Group Join Now
Telegram Group Join Now
ಧಾರವಾಡ : ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳಾದ ಡಾ. ರಾಮ್ ಪ್ರಸಾತ್ ಮನೋಹರ ಅವರು ಇಂದು ಮಧ್ಯಾಹ್ನ ಧಾರವಾಡ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿ, ಯೋಜನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನರೇಂದ್ರ ಗ್ರಾಮ ವ್ಯಾಪ್ತಿಯ ಕಾಯಕನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲಿಸಿದರು. ಮಕ್ಕಳ ದಾಖಲಾತಿ, ಪೊಷನ್ ಅಭಿಯಾನದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಅವರು ಕುರಬಗಟ್ಟಿ ಗ್ರಾಮದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಘಟಕದ ಕಾರ್ಯ ನಿರ್ವಹಣೆ ಬಗ್ಗೆ ಅದನ್ನು ನಿರ್ವಹಿಸುತ್ತಿರುವ ಸ್ತ್ರಿ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರಿಂದ  ಮಾಹಿತಿ ಪಡೆದುಕೊಂಡರು. ಮತ್ತು ಜಲ ಜೀವನ ಮಿಷನ್ ಯೋಜನೆಯಲ್ಲಿ ನೂತನವಾಗಿ ನಿರ್ಮಿಸಿರುವ ಮೇಲ್ಮಟ್ಟದ ಜಲಸಂಗ್ರಹಗಾರ ಓಎಚ್‍ಟಿಗೆ ಭೇಟಿ ನೀಡಿದರು.
ನಂತರ ಕುರಬಗಟ್ಟಿ ಗ್ರಾಮ ಪಂಚಾಯತದ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿ, ಅದರ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿನ ಕೂಸಿನ ಮನೆಗೆ ತೆರಳಿ, ಮಕ್ಕಳ ಆಟ ಪಾಠದ ಬಗ್ಗೆ ವಿವರ ಪಡೆದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಜಿಲ್ಲಾ ಪಂಚಾಯತ ಕಾರ್ಯ ಚಟುವಟಿಕೆ, ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ, ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಸದಾನಂದ ಅಮರಾಪುರ, ಸಿಡಿಪಿಓ, ಪಿಡಿಓ ನಾಗರತ್ನಾ ತಪೇಲಿ, ಗ್ರಾಮ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article