ಧಾರವಾಡ: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನವರಿ 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಜನವರಿ 27 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.