ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಚಿಂತನೆಗಳನ್ನು ನನಸು ಮಾಡಿದ ಏಕೈಕ ಪ್ರಧಾನಿ ನರೇಂದ್ರ ಮೋದಿ : ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ

Ravi Talawar
ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಚಿಂತನೆಗಳನ್ನು ನನಸು ಮಾಡಿದ ಏಕೈಕ ಪ್ರಧಾನಿ ನರೇಂದ್ರ ಮೋದಿ : ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ
WhatsApp Group Join Now
Telegram Group Join Now
ಬೆಳಗಾವಿ: ಸಂವಿಧಾನ ಶಿಲ್ಪಿ, ಸಮಾನತೆ  ಸಮಾಜದ ನಿರ್ಮಾಣದ ಕನಸು ಕಂಡಿದ್ದ ಡಾ. ಬಾಬಾಸಾಹೇಬ ಅಂಬೇಡ್ಕ‌ರ್ ಅವರ ಚಿಂತನೆಗಳನ್ನು ನನಸು ಮಾಡಿದ ಏಕೈಕ ನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ  ಅವರು ಹೇಳಿದರು.
 ಬಿಜೆಪಿ  ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಬಾಬಾಸಾಹೇಬ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಬಾಬಾಸಾಹೇಬರಿಗೆ ನೈಜ ಗೌರವ ಸಲ್ಲಿಸಲು ದೇಶ ಯಾವ ದಿಕ್ಕಿನಲ್ಲಿ
ಸಾಗಬೇಕೋ ಆ ನಿಟ್ಟಿನಲ್ಲಿ ದೇಶವನ್ನು ಒಯ್ಯುವ ಕೆಲಸ ಮೋದಿಜೀ ಅವರಿಂದ 10 ವರ್ಷಗಳಿಂದ ಆಗುತ್ತಿದೆ. ನರೇಂದ್ರ ಮೋದಿಜೀ ಅವರು ಬಾಬಾಸಾಹೇಬರ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ 5 ಸ್ಥಳಗಳನ್ನು ಪಂಚತೀರ್ಥವನ್ನಾಗಿ ಅಭಿವೃದ್ಧಿಗೊಳಿಸಿದ್ದಾರೆ ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಜನರ ಮಧ್ಯೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಕಳಕಳಿ ಇರುವುದು ಬಿಜೆಪಿಗೆ ಮಾತ್ರ. ನರೇಂದ್ರ ಮೋದಿಜೀ ಅವರು ಅದನ್ನು ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಮಹಾನ್ ಚೇತನ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಜೊತೆಗೆ ಅವರ ಧ್ಯೇಯ, ಆದರ್ಶಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.ನಂತರ ಎಲ್ಲಾ ಪದಾಧಿಕಾರಿಗಳು ನಗರದ ಅಂಬೇಡ್ಕರ್ ಗಾರ್ಡನ್ ತೆರಳಿ  ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ ಕೊಲಕಾರ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ,ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ ಸಾಯಣ್ಣವರ,ಮನೋಜ್ ಪಾಟೀಲ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article