ಬೆಳಗಾವಿ : ನಗರದ ರಾಣಿ ಚೆನ್ನಮ್ಮ ಸರ್ಕಲ್ ದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು*
ಪ್ರತಿಭಟನೆ ಉದ್ದೇಶಿಸಿ ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಅಹಿಂದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದಿರುವ ತಾವುಗಳು ಹಿಂದುಳಿದ ವರ್ಗಗಳ ಜನರ ಆರ್ಥಿಕ,
ಔದ್ಯೋಗಿಕ, ಕೃಷಿ, ಮತ್ತು ಶಿಕ್ಷಣಕ್ಕಾಗಿ ನಿಗಮಗಳಿಗೆ ಹಣ ಬಿಡುಗಡೆ ಮಾಡದೇ ಇರುವುದು ಅತ್ಯಂತ
ನೋವಿನ ಸಂಗತಿಯಾಗಿದೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ
ಅಭಿವೃದ್ಧಿಗಾಗಿ 1000 ಕೋಟಿಗೂ ಹೆಚ್ಚು ಅನುದಾನವನ್ನು ದಿ.ದೇವರಾಜ ಅರಸು, ಒಕ್ಕಲಿಗ, ಮರಾಠ,
ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಆಲೆಮಾರಿ
ಅರೆ ಅಲೆಮಾರಿ, ಮಡಿವಾಳ ಮಾಚಿ ದೇವ, ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಹಣ
ಬಿಡುಗಡೆ ಮಾಡಿತ್ತು. ಆದರೆ ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 1600 ಕೋಟಿ
ಬಜೆಟ್‌ನಲ್ಲಿ ಘೋಷಣೆ ಮಾಡಿ ಕೇವಲ 57.04 ಕೋಟಿ ರೂಪಾಯಿ ಮಾತ್ರ ವೆಚ್ಚ ಮಾಡಿ ಮೋಸ
ಮಾಡಿರುವುದು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ 6065
ಅರ್ಜಿಗಳು ಸಲ್ಲಿಕೆಯಾದರೂ ಒಂದು ಪೈಸೆ ಹಣವು ಕೂಡ ಬಿಡುಗಡೆ ಮಾಡದೇ ಇರುವುದು
ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಅನ್ಯಾಯವನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದರು. ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಮಾತನಾಡಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲೆಮರೆ ಕಾಯಿಯಂತೆ ಇರುವ ಅತ್ಯಂತ ಹಿಂದುಳಿದ
ಸಮುದಾಯಗಳಾದ ಹೂಗಾರ, ಕಂಬಾರ, ಕುಂಬಾರ, ಗಾಣಿಗ, ಹಡಪದ, ಈಡಿಗ, ಮತ್ತು ಮಾಳಿ
ಸಮುದಾಯಗಳು ಕೂಡಾ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ಬರಬೇಕೆಂದು ಪ್ರತ್ಯೇಕ
ಅಭಿವೃದ್ಧಿ ನಿಗಮಗಳನ್ನು ಬಿಜೆಪಿ ಸರಕಾರ ಸ್ಥಾಪಿಸಿತ್ತು. ಆದರೆ ತಮ್ಮ ಸರ್ಕಾರ ಇಂತಹ ಸಣ್ಣ ಸಣ್ಣ
ಹಿಂದುಳಿದ ಸಮುದಾಯಗಳ ನಿಗಮಗಳಿಗೆ ಒಂದು ಪೈಸೆ ಹಣ ಬಿಡುಗಡೆ ಮಾಡದೆ ಅನ್ಯಾಯ
ಮಾಡಲಾಗಿರುತ್ತದೆ ಹೀಗಾಗಿ ಕೂಡಲೇ ಸದರಿ ನಿಗಮಗಳಿಗೆ ಹಣವನ್ನು ಮಂಜೂರಾತಿ ಮಾಡಲು ಸನ್ಮಾನ್ಯ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ನಿಗಮಗಳಿಗೆ ತಾವು ಈ ಹಿಂದೆ
ಬಜೆಟಿನಲ್ಲಿ ಘೋಷಣೆ ಮಾಡಿರುವಂತೆ 1600 ಕೋಟಿ ಕೂಡಲೇ ಬಿಡುಗಡೆ ಮಾಡಿ ಅವರ ಆರ್ಥಿಕ
ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಬೇಕೆಂದು ಹೇಳಿದರು ಈ ಸಂದರ್ಭದಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್ ಮಾದಮ್ಮನವರ, ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಸಂತೋಷ ಹಡಪದ,ರೇಖಾ ಚಿನ್ನಾಕಟ್ಟಿ, ಸಚಿನ್ ಕಡಿ, ಯಲ್ಲೇಶ್ ಕೊಲಕಾರ, ಸಂತೋಷ ದೇಶನೂರ, ಸುಭಾಷ್ ಸಣ್ಣವೀರಪ್ಪನವರ, ಯುವರಾಜ ಜಾಧವ, ಧನಂಜಯ ಜಾಧವ, ಮನೋಜ್ ಪಾಟೀಲ್, ಪ್ರಶಾಂತ್ ಅಮ್ಮಿನಭಾವಿ, ವೀರಭದ್ರ ಪೂಜಾರಿ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.