ರಾಜ್ಯದ ಅಭಿವೃದ್ಧಿಗಾಗಿ ದೆಹಲಿ ಭೇಟಿ; ಸಚಿವ ಸಂಪುಟ ವಿಸ್ತರಣೆಗಲ್ಲ: ಡಿಕೆ ಸುರೇಶ್‌

Ravi Talawar
ರಾಜ್ಯದ ಅಭಿವೃದ್ಧಿಗಾಗಿ ದೆಹಲಿ ಭೇಟಿ; ಸಚಿವ ಸಂಪುಟ ವಿಸ್ತರಣೆಗಲ್ಲ: ಡಿಕೆ ಸುರೇಶ್‌
WhatsApp Group Join Now
Telegram Group Join Now

ನವದೆಹಲಿ: ಕೇಂದ್ರದ ವಿವಿಧ ಸಚಿವರ ಜತೆ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ನಂತರ ಮತ್ತೊಮ್ಮೆ ದೆಹಲಿಗೆ ಬಂದು ವಿವಿಧ ಇಲಾಖೆಗಳ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನಿನ್ನೆ ಕೇಂದ್ರದ ವಿವಿಧ ಇಲಾಖೆಗಳ ಸಚಿವರನ್ನು ಭೇಟಿ ಮಾಡಿದ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ನಾನು ಹಾಗೂ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿಲ್ಲ. ಅಭಿವೃದ್ಧಿ ಯೋಜನೆಗಳ ಸಲುವಾಗಿ ಚರ್ಚಿಸಲು ನಾವು ಬಂದಿದ್ದೇವೆ. ರಾಹುಲ್ ಗಾಂಧಿ (Rahul Gandhi) ಅವರ ಭೇಟಿಗೂ ಸಮಯ ಕೋರಿದ್ದೇನೆ. ಇಂದು ಅವರು ಪಟ್ನಾಗೆ ಹೋಗಿದ್ದಾರೆ. ನಾಳೆ ಭೇಟಿ ಮಾಡುವ ಸಾಧ್ಯತೆ ಇದೆ‌ ಎಂದರು.

WhatsApp Group Join Now
Telegram Group Join Now
Share This Article