ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿಯಲ್ಲಿ ವೈದ್ಯ ಸಾವು

Ravi Talawar
ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿಯಲ್ಲಿ ವೈದ್ಯ ಸಾವು
WhatsApp Group Join Now
Telegram Group Join Now

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ವೈದ್ಯರು ತಮ್ಮ ಸುರಕ್ಷತೆ ಮತ್ತು ಭದ್ರತೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಘಟನೆ ವರದಿಯಾಗಿದೆ.

ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಹೋರ್‌ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸೆಪ್ಟೆಂಬರ್‌ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್‌ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ

WhatsApp Group Join Now
Telegram Group Join Now
Share This Article