ಬಳ್ಳಾರಿ,ಮಾ.13
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಏ.05 ರಂದು ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ 119ನೇ ಜಯಂತ್ಯೋತ್ಸವ ಮತ್ತು ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿ ಆಚರಣೆ ಕುರಿತು ಚರ್ಚಿಸಲು ಮಾ.17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಗೆ ಜಿಲ್ಲೆಯ ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿ ಮಹನೀಯರ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಮ್ಮ ಅಮೂಲ್ಯವಾದ ಸಲಹೆ- ಸೂಚನೆಗಳನ್ನು ನೀಡಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರ
ಡಾ.ಬಾಬು ಜಗಜೀವನ ರಾಂ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯೋತ್ಸವ: ಮಾ.17 ರಂದು ಪೂರ್ವಭಾವಿ ಸಿದ್ಧತಾ ಸಭೆ


