‘ಎಲ್ಲರಿಗೂ ಕಾನೂನು ಒಂದೇ’ ತನಿಖೆ ಆಧರಿಸಿ ಮುಂದಿನ ಕ್ರಮ; ಸಚಿವರಾದ ಡಾ. ಜಿ ಪರಮೇಶ್ವರ್‌

Ravi Talawar
‘ಎಲ್ಲರಿಗೂ ಕಾನೂನು ಒಂದೇ’ ತನಿಖೆ ಆಧರಿಸಿ ಮುಂದಿನ ಕ್ರಮ; ಸಚಿವರಾದ ಡಾ. ಜಿ ಪರಮೇಶ್ವರ್‌
WhatsApp Group Join Now
Telegram Group Join Now

ಬೆಂಗಳೂರು, ಜೂನ್‌ 12: ಎಲ್ಲರಿಗೂ ಕಾನೂನು ಒಂದೇ. ನಟ ದರ್ಶನ್‌ಗು ಕಾನೂನು ಒಂದೇ, ಪರಮೇಶ್ವರ್‌ಗು ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು. ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ‌. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ‌. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.

ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಇಲಾಖೆ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ ಎಂದರು.

WhatsApp Group Join Now
Telegram Group Join Now
Share This Article