ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರನ್ನಾಗಿ ಡಾ. ನೆಲ್ಕುದ್ರಿ ಸದಾನಂದ ನೇಮಕ

Sandeep Malannavar
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಭಾರಿ ಅಧ್ಯಕ್ಷರನ್ನಾಗಿ ಡಾ. ನೆಲ್ಕುದ್ರಿ ಸದಾನಂದ ನೇಮಕ
WhatsApp Group Join Now
Telegram Group Join Now
ಬಳ್ಳಾರಿ:ಜ,30..- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಪ್ರಭಾರಿ ಅಧ್ಯಕ್ಷರನ್ನಾಗಿ ರಾಜ್ಯ ಸಂಘಟನೆಯ ಉಪಾಧ್ಯಕ್ಷ ಡಾ. ನೆಲ್ಕುದ್ರಿ ಸದಾನಂದ ಅವರನ್ನು ನೇಮಕ ಮಾಡಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಎಂ.ಎ. ಆಸೀಪ್ರವರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರು ಸಂಘದ ಸದಸ್ಯರ ಜೊತೆ ಉತ್ತಮ ಬಾಂಧವ್ಯ ಹೊಂದದ ಕಾರಣ ಅವರಲ್ಲಿ ಬಹುತೇಖರು ರಾಜ್ಯ ಸಂಘಕ್ಕೆ ಮನವಿ ಸಲ್ಲಿಸಿ, ಜಿಲ್ಲಾಧ್ಯಕ್ಷ ಹುದ್ದೆಗೆ ಬೇರೊಬ್ಬರನ್ನು ಪ್ರಭಾರದಲ್ಲಿ ನೇಮಿಸಲು ಕೋರಿದ್ದರು.
ಅದರಂತೆ, ಸಂಘದ ಬೈಲಾ ನಿಯಮ 18(ಎ)(31)(32) ರ ರೀತ್ಯಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಸಂಘದ ರಾಜ್ಯಾಧ್ಯಕ್ಷರ ಪ್ರದತ್ತವಾದ ಅಧಿಕಾರದನ್ವಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇಲ್ಲಿನ ರಾಜ್ಯ ಉಪಾಧ್ಯಕ್ಷ ಡಾ. ನೆಲ್ಕುದ್ರಿ ಸದಾನಂದ ಇವರನ್ನು ಮುಂದಿನ ಆದೇಶದವರೆಗೆ, ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಹುದ್ದೆಗೆ ಪ್ರಭಾರದಲ್ಲಿರಿಸಿ ಆದೇಶಿಸಿದೆ.
WhatsApp Group Join Now
Telegram Group Join Now
Share This Article