ಮತ್ತಿಕೊಪ್ಪದಲ್ಲಿರುವ ಕೆಎಲ್ಇ ಸಂಸ್ಥೆಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಕೃಷಿ ಚಿಂತಕರಾದ ಮಾನ್ಯ ಡಾ. ಪ್ರಭಾಕರ ಬ. ಕೋರೆಯವರ ೭೮ ನೇ ಹುಟ್ಟುಹಬ್ಬದ ಆಚರಣೆಗೆ ಚಾಲನೆ ನೀಡಲಾಯಿತು.
ಹುಟ್ಟುಹಬ್ಬ ಆಚರಣೆಯ ಭಾಗವಾಗಿ ರೈತರಿಗೆ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಡಿಯಲ್ಲಿ ರೈತರಿಗೆ ತಾಂತ್ರಿಕ ತರಬೇತಿಯನ್ನು ಉದ್ಘಾಟಿಸಿದ ಡಾ. ಪ್ರಭಾಕರ ಕೋರೆ ಹುಟ್ಟುಹಬ್ಬ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಾಧ್ಯಕ್ಷರು ಆದ ಮಾನ್ಯ ಶ್ರೀ ಬಿ. ಆರ್. ಪಾಟೀಲ ಮಾತನಾಡಿ, ಹುಟ್ಟುಹಬ್ಬದ ಅಂಗವಾಗಿ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದು ಪ್ರಥಮ ಕಾರ್ಯಕ್ರಮವಾಗಿದೆ ಎಂದರು. ಕೆಎಲ್ಇ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರು ಕೃಷಿಯಲ್ಲಿ ಸಂಬಂಧಿತ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಅಪಾರ ಆಸಕ್ತಿಹೊಂದಿದ್ದಾರೆ. ಕೃಷಿಕರಲ್ಲಿ ಅಜ್ಞಾನ, ಹವಾಮಾನ ವೈಪರೀತ್ಯಗಳು, ಸುಧಾರಿತ ತಂತ್ರಜ್ಞಾನಗಳ ಕೊರತೆಯಿಂದ ಕೃಷಿ ಲಾಭವಾಗದೆ ರೈತರು ಮತ್ತು ರೈತಮಕ್ಕಳು ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ದಿಸೆಯಲ್ಲಿ ಕೃಷಿ ಲಾಭದಾಯಕವಾಗಲು ರೈತರಿಗೆ ಸಕಾಲದಲ್ಲಿ ಕೃಷಿ ಮಾಹಿತಿ ಹಾಗೂ ತಂತ್ರಜ್ಞಾನ ರೈತರ ಬಾಗಿಲಿನವರೆಗೆ ತಲುಪಿಸಲು ಕೃಷಿ ವಿಜ್ಞಾನ ಕೇಂದ್ರದಿಂದ ಸಾಧ್ಯವೆಂದು ಅರಿತು ೨೦೧೧ ರಲ್ಲಿ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಗ್ರಾಮದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದ ಕೀರ್ತಿ ಡಾ. ಪ್ರಭಾಕರ ಕೋರೆಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು. ಕೇಂದ್ರದಲ್ಲಿ ರೈತರು ತರಬೇತಿ ಪಡೆಯುವ ಅವಧಿಯಲ್ಲಿ ವಾಸ್ತವ್ಯ ಮಾಡಲು ಸುಸಜ್ಜಿತವಾದ ರೈತರ ವಸತಿ ಗೃಹವನ್ನು ನಿರ್ಮಿಸಲಾಗಿದೆ ಅಲ್ಲದೆ, ನೂರಿತ ವಿಜ್ಞಾನಿಗಳ ತಂಡ ರೈತರ ಕೃಷಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕಾರ್ಯೋನ್ಮುಖರಾಗಿದ್ದು, ಮಾನ್ಯ ಡಾ. ಪ್ರಭಾಕರ ಕೋರೆಯವರ ಆಶಯದಂತೆ ರೈತರು ಕೇಂದ್ರದ ಲಾಭ ಪಡೆದು ವ್ಯವಸಾಯದಲ್ಲಿ ಯಶಸ್ಸು ಕಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸುವಂತೆ ಕರೆ ನೀಡಿದರು.
ಕೆಎಲ್ಇ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಡಾ. ಸುನೀಲ ಜಲಾಲಪುರೆಯವರು ಮಾತನಾಡಿ, ಡಾ. ಪ್ರಭಾಕರ ಕೋರೆಯವರ ಕೃಷಿಗೆ ಸಂಬಂಧಿತ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಡಾ. ಪ್ರಭಾಕರ ಕೋರೆಯವರು ಕೃಷಿ ವಿಜ್ಞಾನ ಕೇಂದ್ರದ ಮೂಲಕ ಆಧುನಿಕ ಕೃಷಿ ತಂತ್ರಜ್ಞಾನಗಳ ಅಳವಡಿಕೆಯಿಂದ ಕೃಷಿ ಲಾಭದಾಯಕವೆಂದು ಮನಗಂಡು ಕೃಷಿ ವಿಜ್ಞಾನ ಕೇಂದ್ರ ಸ್ಥಾಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟರು. ಜೊತೆಗೆ ಇದೇ ಸಂದರ್ಭದಲ್ಲಿ ಶುಭ ಹಾರೈಸುತ್ತ ಅವರಿಗೆ ದೀರ್ಘಾಯುಷ್ಯ ಆರೋಗ್ಯ ಹಾಗೂ ಇನ್ನೂ ಹೆಚ್ಚಿನ ಜನಪರ ಸೇವೆ ಮಾಡುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಹುಟ್ಟು ಹಬ್ಬದ ಸಮಾರಂಭದ ನಿಮಿತ್ಯ ಕೇಂದ್ರದಲ್ಲಿ ಅರಣ್ಯ ಸಸಿಗಳನ್ನು ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿ?ತ್ನ ಕೃಷಿ ವಿಜ್ಞಾನ ಕೇಂದ್ರಗಳ ಬೆಂಗಳೂರಿನ ವಲಯ ಕಚೇರಿಯ ಪ್ರಧಾನ ವಿಜ್ಞಾನಿಗಳಾದ ಡಾ. ಬಿ. ಟಿ. ರಾಯುಡು, ಡಾ. ಕೆ. ತಿಮ್ಮಪ್ಟ ಹಾಗೂ ಸಹಾಯಕ ಆಡಳಿತ ಅಧಿಕಾರಿಯಾದ ಶ್ರೀ ಸೆಂಥಿಲ್ಕುಮಾರ ಭಾಗವಹಿಸಿದ್ದರು. ಹುಟ್ಟುಹಬ್ಬದ ಚಾಲನಾ ಕಾರ್ಯಕ್ರಮದಲ್ಲಿ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಪ್ರಭಾಕರ ಕೋರೆಯವರ ಕೃಷಿ ಚಿಂತಕರಾಗಿದ್ದು ರೈತಪರ ಕಾಳಜಿಯನ್ನು ಹೊಂದಿದವರಾಗಿದ್ದಾರೆ. ಈ ದಿಸೆಯಲ್ಲಿ ಅವರ ಹುಟ್ಟುಹಬ್ಬದ ಅಂಗವಾಗಿ ರೈತರಿಗೆ ಕೃಷಿ ತಾಂತ್ರಿಕ ತರಬೇತಿಯನ್ನು ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಎಸ್. ಎಮ್. ವಾರದ ಸ್ವಾಗತ ಕೋರಿದರು. ಕೇಂದ್ರದ ವಿಜ್ಞಾಗಳಾದ ಡಾ. ಎಸ್. ಎಸ್. ಹಿರೇಮಠ, ಪ್ರವೀಣ ಯಡಹಳ್ಳಿ, ವಿನೋದ ಕೋಚಿ, ಶಂಕರಗೌಡ ಪಾಟೀಲ ಇವರು ತರಬೇತಿ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಂಜುನಾಥ ಚೌರಡ್ಡಿ
ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು