ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಗಳು, ವಚನಗಳು ಭಕ್ತಿಯನ್ನು ಪ್ರತಿಬಿಂಬಿಸುವುದರ ಜೊತೆಗೆ ಸಮಾನತೆ, ಕಾಯಕ, ದಾಸೋಹ ಮತ್ತು ಪ್ರಾಮಾಣಿಕತೆಯಂತಹ ಮಾನವೀಯ ಮೌಲ್ಯಗಳನ್ನು ತಿಳಿಸಿ ಕೊಡುತ್ತವೆ ಎಂದರು.
ಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ವಿಶ್ರಾಂತ ಪ್ರಾಚಾರ್ಯ ಡಾ. ಹೇಮಾ ಸೊನೊಳ್ಳಿ ಅವರು ಕಾರಂಜಿ ಮಠದ ಸೇವಾ ಕಾರ್ಯಗಳನ್ನು ಪ್ರಶಂಶಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಕಲ್ಯಾಣ ಸಂಸ್ಥೆಯನ್ನು ಪ್ರಾರಂಭಿಸಿ ಸಮಾಜ ಸೇವೆ ಮಾಡುತ್ತಾ ಸಾರ್ಥಕ 75 ವರ್ಷಗಳನ್ನು ಪೂರೈಸಿದ ಆದರ್ಶ ಶಿಕ್ಷಕ ದಂಪತಿಗಳಾದ ಎಂ. ಎಸ್. ಚೌಗುಲ ಹಾಗೂ ವೈಜಯಂತಿ ಚೌಗಲಾ ದಂಪತಿಗಳನ್ನು ಸನ್ಮಾನಿಸಲಾಯಿತು.
ಉಪನ್ಯಾಸಕ ಎ.ಕೆ. ಪಾಟೀಲ ಸ್ವಾಗತಿಸಿ ನಿರೂಪಿಸಿದರು. ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳು ಪ್ರಾರ್ಥಿಸಿದರು. ಕೊನೆಗೆ ನ್ಯಾಯವಾದಿ ವಿ.ಕೆ. ಪಾಟೀಲ ವಂದಿಸಿದರು.