ಹುಬ್ಬಳ್ಳಿ : ದಾನೇಶ್ವರಿ ಸಂಗೀತ ವಿದ್ಯಾಲಯದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಡೆದಾಡುವ ದೇವರು, ತ್ರೀವಿಧ ದಾಸೋಹಿ ತುಮಕೂರ ಸಿದ್ಧಗಂಗಾಮಠದ ಪರಮ ಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಜಿಯವರ ಪುಣ್ಯ ಸ್ಮರಣೆ ನಿಮಿತ್ ಗಣ್ಯರು ಪೂಜ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾ-ಭಕ್ತಿಯ ನಮನಗಳನ್ನು ಸಲ್ಲಿಸಿದರು. ನುಡಿಗಳ ಮೂಲಕ ಶ್ರೀಗಳ ಗುಣಗಾನ ಮಾಡಿದರು.
ದಾನೇಶ್ವರಿ ಸಂಗೀತ ವಿದ್ಯಾಲಯದ ಶಿಕ್ಷಕಿ ಹಾಗೂ ಮಕ್ಕಳು ಶ್ರದ್ಧಾ, ಭಕ್ತಿಯಿಂದ ಸಂಗೀತ, ವಚನಗಳನ್ನು ಹಾಡುವುದರ ಮೂಲಕ ಗೌರವಾರ್ಪಣೆ ಸಲ್ಲಿಸಲಾಯಿತು. ದಾನೇಶ್ವರಿ ಸಂಗೀತ ಪಾಠಶಾಲೆಯ ಸಂಗೀತ ಶಿಕ್ಷಕಿ, ಕನ್ನಡ ಪ್ರಾಧ್ಯಾಪಕಿ ಪ್ರೊ ಶೋಭಾ ಜಾಬಿನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಮೃದ್ದ , ಶಿವಾನಿ , ಧ್ರುವಂತ , ಕೃಷ್ಣ , ವೇದಾ, ಸಿಂಚನಾ, ಆವನಿ, ತಾನ್ವಿ, ಸಾನ್ವಿ, ಸಾತ್ವಿಕ್, ಅಹನಾ , ಆಯುಷ್, ಮಂದಾರ , ಇಂಜಿನಿಯರ್ ಮಲ್ಲಿಕಾರ್ಜುನ ಜಾಬಿನ, ವಿಮಲ್ ರೊಕಡೆ , ನಾಗರಾಜ್ ಕರಡಿಕೊಪ್ಪ,ಆರತಿ, ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. ದಾನೇಶ್ವರಿ ಸಂಗೀತ ಪಾಠಶಾಲೆಯ ಮಕ್ಕಳು ವಚನ ಗಾಯನ ಪ್ರಸ್ತುತಪಡಿಸಿದರು.

ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ಶ್ರೀಗಳು ಸರ್ವವ್ಯಾಪಿ. ಅವರು ಭಕ್ತರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೊಣ. ಸಮಷ್ಠಿ ಕಲ್ಯಾಣವನ್ನೇ ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಶ್ರೇಷ್ಠ ಸಂತರು, ಶರಣರು ತುಮಕೂರ ಸಿದ್ಧಗಂಗಾಮಠದ ಪರಮ ಪೂಜ್ಯ ಲಿಂ. ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಜಿಯವರು. ತುಮಕೂರ ಸಿದ್ಧಗಂಗಾಮಠ ಎಲ್ಲರಲ್ಲಿ ಪ್ರೀತಿ, ವಿಶ್ವಾಸ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ. ಪೂಜ್ಯರು ಸೇವೆಗಳಿಗೆ ಹೊಸ ಭಾಷ್ಯ ನೀಡಿದ್ದಾರೆ. ಕಾಯಕ, ದಾಸೋಹ, ಶಿವಯೋಗದ ಮಹತ್ವವನ್ನು ಎಲ್ಲರಲ್ಲಿ ಸದಾ ಜಾಗೃತಿಯನ್ನುಂಟು ಮಾಡಿದ ಮಹಾತ್ಮರು. ವಿದ್ಯಾರ್ಥಿಗಳಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದ ಪೂಜ್ಯರು ಸದಾ ಸ್ಮರಣಿಯರು. ಶ್ರೀಗಳು ಸಲ್ಲಿಸಿದ ಸೇವೆಯನ್ನು ಶ್ರದ್ಧಾ, ಭಕ್ತಿಯಿಂದ ಸ್ಮರಿಸಿದರು. ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ದಾನೇಶ್ವರಿ ಸಂಗೀತ ವಿದ್ಯಾಲಯದ ಸಹಯೋಗದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದರು.


