ಮಳೆಗೆ ಟೊಮೇಟೊ ಬೆಲೆ ಭಾರಿ ಕುಸಿತ; ರೈತರು ಕಂಗಾಲು

Ravi Talawar
ಮಳೆಗೆ ಟೊಮೇಟೊ ಬೆಲೆ ಭಾರಿ ಕುಸಿತ; ರೈತರು ಕಂಗಾಲು
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ, ಅ.16: ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದೆ  ಈ ಬಿಟ್ಟೂಬಿಡದ ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೇಟೊಗೆ  ಕಂಟಕ ಎದುರಾಗಿದ್ದು ಟೊಮೇಟೊ ಬೆಲೆ ಕುಸಿದಿದೆ.

ಮೂರು ದಿನಗಳ ಹಿಂದೆ 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ ಸಾವಿರ ರೂಪಾಯಿ ಇತ್ತು. ಆದರೆ ಈಗ ದಿಢೀರ್ ಬೆಲೆ ಕುಸಿದಿದ್ದು 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ 250 ರೂಪಾಯಿಗೆ ಆಗಿದೆ. ಮಳೆಯಿಂದ ಟೊಮೇಟೊ ಒಂದು ಕಡೆಯಿಂದ ಇನ್ನೊಂದು ಕಡೆ ಸಾಗಾಟವಾಗದ ಕಾರಣ ಚಿಕ್ಕಬಳ್ಳಾಪುರದ ಎಪಿಎಂಸಿ ಟೊಮೇಟೊ ಮಾರುಕಟ್ಟೆಯಲ್ಲಿ ಟೊಮೇಟೊ ಕೇಳುವವರೇ ಇಲ್ಲದಂತಾಗಿದೆ.

ಮಳೆಯಿಂದ ವಿವಿಧ ರಾಜ್ಯಗಳಿಗೆ ಟೊಮೇಟೊ ಎಕ್ಸಪೋರ್ಟ್ ಆಗ್ತಿಲ್ಲ. ದಿಢೀರ್ ಬೆಲೆ ಕುಸಿದಿದೆ. ಮಳೆಯಿಂದ ಹಣ್ಣುಗಳು ಹಾಳಾಗುತ್ತಿರುವ ಹಿನ್ನಲೆ ಖರೀದಿದಾರರು ಬರ್ತಿಲ್ಲ ಎಂದು ರೈತರೊಬ್ಬರು ಕಣ್ಣೀರು ಹಾಕಿದ್ದಾರೆ.

ಇನ್ನು ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿಲ್ಲ. ಮಳೆಯ ಮುನ್ಸೂಚನೆ ಇದ್ರೂ ಸೂಕ್ತ ಕ್ರಮ ಕೈಗೊಂಡಿಲ್ಲ.

WhatsApp Group Join Now
Telegram Group Join Now
Share This Article