ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬೆಳ್ಳಂಬೆಳಗ್ಗೆಯೇ ED ದಾಳಿ

Ravi Talawar
ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬೆಳ್ಳಂಬೆಳಗ್ಗೆಯೇ ED ದಾಳಿ
WhatsApp Group Join Now
Telegram Group Join Now

ಕಾರವಾರ, ಆಗಸ್ಟ್ 13: ಉತ್ತರ ಕನ್ನಡ ಜಿಲ್ಲೆ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 6 ಕಾರುಗಳಲ್ಲಿ ಬಂದಿರುವ 24 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ದೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು. ಆನಂತರ ಜೈಲು ಪಾಲಾಗಿದ್ದ ಅವರು ಶಾಸಕ ಸ್ಥಾನದಿಂದ ಅನರ್ಹರಾಗುವ ಭೀತಿ ಎದುರಿಸುತ್ತಿದ್ದರು.

WhatsApp Group Join Now
Telegram Group Join Now
Share This Article