ನವದೆಹಲಿ: ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಮಾಜಿ ಭಾರತೀಯ ಕ್ರಿಕೆಟಿಗ ಶಿಖರ್ ಧವನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.
39 ವರ್ಷದ ಭಾರತದ ಮಾಜಿ ಕ್ರಿಕೆಟಿಗ ಕೆಲವು ಅನುಮೋದನೆಗಳ ಮೂಲಕ ಈ ಅಪ್ಲಿಕೇಶನ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಆ್ಯಪ್ ಜೊತೆಗಿನ ಅವರ ಸಂಪರ್ಕವನ್ನು ತಿಳಿಯಲು ಇ.ಡಿ ವಿಚಾರಣೆ ನಡೆಸಲಿದೆ.
ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಹಲವಾರು ಜನರನ್ನು ಮತ್ತು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿದೆ ಅಥವಾ ಭಾರಿ ಪ್ರಮಾಣದ ತೆರಿಗೆಯನ್ನು ತಪ್ಪಿಸಿದೆ ಎಂದು ಹೇಳಲಾದ ಹಲವಾರು ಪ್ರಕರಣಗಳನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.