ಗದಗ,ಏಪ್ರಿಲ್ 23: ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಅಂಗವಾಗಿ ಗದಗ ಜಿಲ್ಲಾ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾಧ್ಯಮ ತಂಡ ಒಳಗೊಂಡ 15 ಸೀಮಿತ ಓವರ್ ಗಳ ಟೆನ್ನಸಿ ಬಾಲ್ ಮತ್ತು ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದೆ.
ಆ ದೆಸೆಯಲ್ಲಿ ಮಂಗಳವಾರ ಮುಂಡರಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಂದಾಯ ಇಲಾಖೆ ತಂಡದ ವಿರುದ್ದ ಶಿಕ್ಷಣ ಇಲಾಖೆಯು ಎರಡನೇ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆಲುವನ್ನು ಸಾಧಿಸಿದೆ ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ