ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40 ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ 45 ದಿನಗಳ ಉತ್ಸವವು ಜನವರಿ 13ರಿಂದ ಫೆಬ್ರವರಿ 26ರವರೆಗೆ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಆಧ್ಯಾತ್ಮಿಕ ಸಂಪ್ರದಾಯಗಳನ್ನು ಪ್ರದರ್ಶಿಸುತ್ತದೆ. ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಹಲವಾರು ಪ್ರಯತ್ನಗಳನ್ನು ಕೈಗೊಳ್ಳಲಾಗಿದೆ.
3,308 ಪಾಂಟೂನ್‌ಗಳನ್ನು ಬಳಸಿಕೊಂಡು 30 ಪಾಂಟೂನ್ ಸೇತುವೆಗಳ ನಿರ್ಮಾಣ ನಡೆಯುತ್ತಿದೆ. ಅವುಗಳಲ್ಲಿ 28 ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಈ ಸೇತುವೆಗಳು ಕುಂಭ ಮೇಳದ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಸ್ಥಳೀಯ ನಿವಾಸಿಗಳು, ಸಂತರು ಮತ್ತು ಆಡಳಿತಾಧಿಕಾರಿಗಳಿಗೆ ಸಂಚಾರವನ್ನು ಸುಗಮಗೊಳಿಸುತ್ತದೆ. ಪ್ರಯಾಗರಾಜ್‌ನಲ್ಲಿ ಮಹಾಕುಂಭ ಜನವರಿ 13ರಂದು ಪ್ರಾರಂಭವಾಗುತ್ತದೆ. ಭಾರತೀಯ ರೈಲ್ವೆ 3,000 ವಿಶೇಷ ರೈಲುಗಳನ್ನು ನಿರ್ವಹಿಸಲಿದೆ.