ರನ್ನ ಬೆಳಗಲಿ: ಏ.8., ಸ್ಥಳಿಯ ಪಟ್ಟಣ ಪಂಚಾಯತ ಆವರಣದಲ್ಲಿ ೨೦೨೪ರ ಲೋಕಸಭಾ ಚುನಾವಣೆ ನಿಮಿತ್ಯವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ ಬಾಗಲಕೋಟೆ ಮತ್ತು ತಾಲೂಕ ಆಡಳಿತ ,ತಾಲೂಕ ಸ್ವೀಪ್ ಸಮಿತಿ ಮುಧೋಳ, ಪಟ್ಟಣ ಪಂಚಾಯತ್ ಕಾರ್ಯಾಲಯ ರನ್ನ
ಬೆಳಗಲಿ ಆಶ್ರಯದಲ್ಲಿ ಮೇಣದಬತ್ತಿ ಬೆಳಗುವುದರ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮವು ನಡೆಯಿತು.
ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗಳಾದ ನಾಮದೇವ ಲಮಾಣಿ ಸಾರ್ವಜನಿಕರಿಗೆ ಮತದಾರರ ಪ್ರತಿಜ್ಞಾ ವಿಧಿಯಾದ ಅಂದರೆ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ,ಜಾತಿ, ಮತ,
ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಒಂದು ಕಾರ್ಯಕ್ರಮದಲ್ಲಿ ಪಿ.ಡಿ.ನಾಗನೂರ, ಎಸ್. ಬಿ. ಚೌದ್ರಿ, ಸತ್ಯಪ್ಪ ಹನಗಂಡಿ, ರಾಮಣ್ಣ ಹುನ್ನೂರ, ಮಹಾಂತೇಶ.ಬಿ, ಸುಗಂಧಾ ಸೊನೋನೆ ಪತ್ರಕರ್ತರಾದ ರಾಘವೇಂದ್ರ ನೀಲಣ್ಣವರ.