ನಾಳೆಯಿಂದ ಬಿಜೆಪಿ ಪಾದಯಾತ್ರೆ ಮೂಲಕ ಮತಯಾಚನೆ

Ravi Talawar
ನಾಳೆಯಿಂದ ಬಿಜೆಪಿ ಪಾದಯಾತ್ರೆ ಮೂಲಕ ಮತಯಾಚನೆ
WhatsApp Group Join Now
Telegram Group Join Now

ಬಾಗಲಕೋಟೆ,ಏಪ್ರಿಲ್ 11: ಲೋಕಸಭಾ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷ ಬಾಗಲಕೋಟೆ ಮತಕ್ಷೇತ್ರದಿಂದ ನಗರದಲ್ಲಿ ನಾಳೆ ೧೨-೦೪-೨೦೨೪ ಶುಕ್ರವಾರದಂದು ಪಾದಯಾತ್ರೆ ಮೂಲಕ ಬೆಳಿಗ್ಗೆ ಮನೆ ಮನೆ ತೆರಳಿ ಮತಯಾಚನೆ ಮಾಡಲಿದ್ದಾರೆ.

ಸಂಜೆ ಗ್ರಾಮೀಣ ಭಾಗದಲ್ಲಿ ಪ್ರಚಾರ ಕೈಗೊಂಡಿದೆ, ದಿನಾಂಕ ೧೨ ಶುಕ್ರವಾರ ದಂದು ಬೆಳಿಗ್ಗೆ ೮ ಗಂಟೆಗೆ ನಗರದ ಶ್ರೀ ಮೋಟಗಿ ಬಸವವೇಶ್ವರ ದೇವಸ್ಥಾನದಲ್ಲಿ ಬಾಗಲಕೋಟೆ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ನಂತರ ಪಾಯಾತ್ರೆ ಮೂಲಕ ಮನೆ ಮನೆ ತೆರಳಿ ಮತಯಾಚನೆ ಮಾಡಲಿದ್ದಾರೆ

ಪಾದಯಾತ್ರೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಸಂಸದರಾದ ಪಿ.ಸಿ.ಗದ್ದಿಗೌಡರ,ಚುನಾವಣಾ ಉಸ್ತುವಾರಿ ಲಿಂಗರಾಜ ಪಾಟೀಲ ಸೇರಿದಂತೆ ಸ್ಥಳಿಯ ಜನಪ್ರತಿನಿದಿಗಳು,ಪಕ್ಷ ಮುಖಂಡರು,ಹಿತೈಸಿಗಳು,ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿಲಿದ್ದಾರೆ.

ನಗರಸಭೆ ಸದಸ್ಯರು, ವಾರ್ಡ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮೋರ್ಚಾದ ಎಲ್ಲ ಪದಾಧಿಕಾರಿಗಳು, ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರ, ಸಾಮಾಜಿಕ ಜಾಲತಾಣ, ವಿವಿಧ ಪ್ರಕೋಷ್ಠದ ಪದಾಧಿಕಾರಿಗಳು ಹಾಗೂ ಪಾರ್ಟಿಯ ಎಲ್ಲ ಕಾರ್ಯಕರ್ತರು ಆಗಮಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿ ಪ್ರಚಾರವನ್ನು ಯಶಸ್ವಿಗೋಳಿಸಲಿದ್ದಾರೆ.

ಅದೆ ರೀತಿ ಸಂಜೆ ಗ್ರಾಮೀಣ ಭಾಗದ ಐಹೊಳೆ,ಕಳ್ಳಿಗುಡ್ಡ, ನಿಂಬಲಗುಂದಿ,ಹೂವಿನಹಳ್ಳಿ,ಮುಳ್ಳೂರ ಮತ್ತು ರಾಮಥಾಳ ಗ್ರಾಮದಲ್ಲಿ ಪ್ರಚಾರವನ್ನು ಹಮ್ಮಿಕೊಂಡಿದ್ದು ಈ ಎಲ್ಲ ಪ್ರಚಾರ ಕಾರ್ಯದಲ್ಲಿ ನಗರ ಹಾಗೂ ಗ್ರಾಮೀಣ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ನಗರ ಮಂಡಲ ಆದ್ಯಕ್ಷ ಬಸವರಾಜ ಹುನಗುಂದ,ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣುರ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

WhatsApp Group Join Now
Telegram Group Join Now
Share This Article