ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

Ravi Talawar
ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
WhatsApp Group Join Now
Telegram Group Join Now

ಮೈಸೂರು: ಬಿಬಿಎಂಪಿ ಬದಲು ನಿನ್ನೆಯಷ್ಟೆ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ರೇಟರ್ ಬೆಂಗಳೂರಿಗೆ ಶೀಘ್ರವೇ ಚುನಾವಣೆ ಮಾಡುತ್ತೇವೆ. ಕ್ಯಾಬಿನೆಟ್ ನಲ್ಲಿ ಎಲ್ಲರೂ ಒಪ್ಪಿದ್ದಾರೆ. ಶೀಘ್ರವೇ ಸಬ್ ಕಮಿಟಿ ಮಾಡುತ್ತೇವೆ ಎಂದರು.

ಗ್ರೇಟರ್ ಬೆಂಗಳೂರು ಅಲ್ಲ ಕ್ವಾಟರ್ ಬೆಂಗಳೂರು ಎಂಬ ಆರ್ ಅಶೋಕ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಮೊದಲೇ ವಿರೋಧ ಮಾಡಬಹುದಿತ್ತು. ಆದರೆ ಅಶೋಕ್ ಮಾಡಲಿಲ್ಲ. ವಿಪಕ್ಷ ನಾಯಕನಾಗಿ ಅಷ್ಟು ಟೀಕೆ ಮಾಡದಿದ್ರೆ ಹೇಗೆ? ಅವರಿಗೆ ನಾವು ಗೌರವ ಕೊಡುತ್ತೇವೆ. ಆದರೆ ಅವರೇ ಗ್ರೇಟರ್ ಬೆಂಗಳೂರಿಗೆ ಸಲಹೆಗಳನ್ನು ಕೊಟ್ಟಿದ್ದಾರೆ. ಯಾಕೆ ಕೊಟ್ರು ? ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ಇವರೆಲ್ಲರೂ ಒಪ್ಪಿದ್ದಾರೆ. ಈಗ ವಿಪಕ್ಷವಾಗಿ ಟೀಕೆ ಮಾಡ್ತಿದಾರೆ. ಅವರ ಕೆಲಸ ಅವರು ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪಕ್ಷಕ್ಕಿಂತ, ವ್ಯಕ್ತಿಗಿಂತ ದೇಶ ಮುಖ್ಯ ಅಂತ ಹೇಳಿದ್ದೇವೆ. ಪ್ರಧಾನಿ ಅವರ ತೀರ್ಮಾನಕ್ಕೆ ಬದ್ಧ ಅಂತ ಹೇಳಿದ್ದೇವೆ. ಎಲ್ಲಾ ಪಕ್ಷಗಳ ಮೀಟಿಂಗ್ ಕರೀರಿ ಅಂತ ಮನವಿ ಮಾಡಿದ್ದೇವೆ. ಪಾರ್ಲಿಮೆಂಟ್ ನಲ್ಲಿ ಹೇಗೆ ಕದನ ವಿರಾಮ ಆಯ್ತು ಅಂತ ಹೇಳಿ ಅಂತ ಪ್ರಧಾನಿಗೆ ಮನವಿ ಮಾಡಿದ್ದೇವೆ. ಇಂದಿರಾಗಾಂಧಿ ಕಾಲದಿಂದಲೂ ಈ ರೀತಿ ಆಗಿರಲಿಲ್ಲ. ಹೊರಗಿನ ದೇಶದವರು ನಮ್ಮ ದೇಶದ ವಿಷಯಕ್ಕೆ ಮೂಗು ತೂರಿಸುವುದು ಸರಿಯಲ್ಲ ಅನ್ನೋದು ಎಲ್ಲರ ಅಭಿಪ್ರಾಯ ಎಂದರು. ಕಬಿನಿಯಲ್ಲಿ ಅಕ್ರಮ ರೆಸಾರ್ಟ್ ತಲೆ ಎತ್ತುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಆ ಬಗ್ಗೆ ನನಗೆ ಗೊತ್ತಿಲ್ಲ. ಅಕ್ರಮ ರೆಸಾರ್ಟ್ ಪಟ್ಟಿ ಮಾಡಿ ಕೊಡಿ, ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article