ಬೆಂಗಳೂರು, ಜನವರಿ 24: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ನಡೆದಿದೆ. ಹೀಗಾಗಿ ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ 3 ಗಂಟೆಗೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸದ್ಯ ತುರ್ತು ಸಂಪುಟ ಸಭೆ ಕರೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ರಾಜಮನೆತನ ಮತ್ತು ರಾಜ್ಯ ಸರ್ಕಾ ರದ ನಡುವಿನ ತಿಕ್ಕಾಟ ನಡೆಯುತ್ತಿದೆ. ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಬೇಕಾದ ಹಿನ್ನೆಲೆ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನಾಳೆ ಸಂಪುಟ ಸಭೆ ಕರೆದಿದ್ದಾರೆ.