ಉದ್ಯೋಗದ ಜೊತೆಗೆ ಆರೋಗ್ಯಕ್ಕೆ ಮಹತ್ವ ನೀಡಿ : ಇಒ ರಾಮರಡ್ಡಿ ಪಾಟೀಲ್

Ravi Talawar
WhatsApp Group Join Now
Telegram Group Join Now

ಬೆಳಗಾವಿ,03: ಕೂಲಿಕಾರ್ಮಿಕರು ಕೆಲಸದ ಜೊತೆಗೆ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕೆಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರಡ್ಡಿ ಪಾಟೀಲ್   ಹೇಳಿದರು.

ತಾಲ್ಲೂಕ ಪಂಚಾಯತ ಬೆಳಗಾವಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಶಿವಾಪೂರ ಗ್ರಾಮದಲ್ಲಿ ಸೋಮವಾರ ಜೂನ್‌ 03 ರಂದು ಆಯೋಜಿಸಿದ್ದ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕಾರ್ಮಿಕರಿಗೆ ಕುಟುಂಬದ ಜವಾಬ್ದಾರಿ ಮತ್ತು ಆರ್ಥಿಕ ತೊಂದರೆ ಇರುವುದರಿಂದ ಆರೋಗ್ಯದ ಕಡೆ ಗಮನಹರಿಸುವುದಿಲ್ಲ ಇದರಿಂದಾಗಿ ತಮ್ಮ ಆರೋಗ್ಯಕ್ಕೆ ತೊಂದರೆಯಾಗಿ ದುಡಿಮೆ ಇಲ್ಲದಂತಾಗಿ ಮತ್ತಷ್ಟು ತೊಂದರೆಗೆ ಒಳಗಾಗುವ ಸಂಭವ ಇರುತ್ತದೆ. ಸಮಯಕ್ಕೆ ಸರಿಯಾಗಿ ಊಟೋಪಚಾರ ಮಾಡಿಕೊಂಡು ಉತ್ತಮ ಆರೋಗ್ಯವಂತರಾಗಿ ಬಾಳಬೇಕೆಂದು ತಿಳಿಸಿದರು.

ಕೂಲಿಕಾರರು ತಮ್ಮ ಜಮೀನಿನಲ್ಲಿ ಕೃಷಿಹೊಂಡ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದು. ಜತೆಗೆ ಜಾನುವಾರು, ಮೇಕೆಗಳು ಇದ್ದರೆ ದನದದೊಡ್ಡಿ, ಕುರಿದೊಡ್ಡಿ ಸಹ ನಿರ್ಮಿಸಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶವಿದೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡೆದುಕೊಳ್ಳಬಹುದು. ಕೂಲಿಕಾರರು ವೈಯಕ್ತಿಕ ಬ್ಯಾಂಕ್ ಖಾತೆ ಹೊಂದಿದ್ದರೆ ಮಾತ್ರ ಸಕಾಲದಲ್ಲಿ ಕೆಲಸ ನೀಡಲು ಮತ್ತು ಕೂಲಿ ಪಾವತಿಸಲು ಸಾಧ್ಯ. ಉದ್ಯೋಗ ಚೀಟಿಯಲ್ಲಿರುವ ಕೂಲಿಕಾರರು ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿಸಬೇಕು ಎಂದರು.

ಈ ವೇಳೆ ನರೇಗಾ ಕೂಲಿಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ವಿವಿಧ ತಪಾಸಣೆ ಮಾಡಲಾಯಿತು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಪತ್ತಾರ, ಕಾರ್ಯದರ್ಶಿ ಹರಿಯರ ಬಡಿಗೇರ ಐಇಸಿ ಸಂಯೋಜಕ ರಮೇಶ ಮಾದರ ಗ್ರಾಮ ಪಂಚಾಯತಿ ಮತ್ತು ವೈಧ್ಯಕೀಯ ಸಿಬ್ಬಂದಿಗಳು ಇದ್ದರು.

WhatsApp Group Join Now
Telegram Group Join Now
Share This Article