ನೇಸರಗಿ: ದಿನಾಂಕ 26-10-2024 ರಂದು ನಡೆದ ಬೈಲಹೊಂಗಲ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೇಸರಗಿ-ಮಲ್ಲಾಪೂರದ ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ನಿಸರ್ಗಾ ಮಹೇಶ ಹುದ್ದಾರ ಇವಳು ಇಂಗ್ಲೀಷ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನದಲ್ಲಿ ವಿಜೇತಳಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಅವಳಿಗೆ ಶ್ರೀ ಗಾಳೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪ. ಪೂ. ಶ್ರೀ ಚಿದಾನಂದ ಮಹಾಸ್ವಾಮಿಗಳು, ಸಂಸ್ಥೆಯ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.