ಸಂವಿಧಾನದಿಂದ ಸಮಾನತೆ: ಪ್ರೊ.ಎಂ ಮುನಿರಾಜು ಅಭಿಮತ

Sandeep Malannavar
ಸಂವಿಧಾನದಿಂದ ಸಮಾನತೆ: ಪ್ರೊ.ಎಂ ಮುನಿರಾಜು ಅಭಿಮತ
WhatsApp Group Join Now
Telegram Group Join Now
ಬಳ್ಳಾರಿ,ಜ.27-ಸಂವಿಧಾನದ ಭದ್ರ ಅಡಿಪಾಯವಾದ ಕಾನೂನಿನ ಚೌಕಟ್ಟಿನಿಂದ ಇಂದು ದೇಶದ ನಾಗರಿಕರೆಲ್ಲ ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ. ಗಣರಾಜ್ಯೋತ್ಸವಕ್ಕಾಗಿ ಶ್ರಮಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ತಂಡವನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಹೇಳಿದರು.
77ನೇ ಗಣರಾಜ್ಯೋತ್ಸವದ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನದ ನೆಲೆಗಟ್ಟಿನಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್, ಸುಸಜ್ಜಿತ ಗ್ರಂಥಾಲಯ, ಗುಣಮಟ್ಟದ ಆಹಾರ ಸೌಲಭ್ಯ ಒದಗಿಸಲು ಹಂತ-ಹAತವಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.
ಕಲ್ಯಾಣ-ಕರ್ನಾಟಕ ಭಾಗದ ವಿದ್ಯಾರ್ಥಿಗಳು ಉದ್ಯಮಶೀಲರಾಗಲು ಬೇಕಿರುವ ಕೌಶಲ್ಯಾಧಾರಿತ ಶಿಕ್ಷಣ ನೀಡಲು ವಿವಿಯ ಎಲ್ಲ ಸಿಬ್ಬಂದಿ ಶ್ರಮಿಸಬೇಕು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಆದಷ್ಟು ಬೇಗ ನಿರ್ಮಿಸಲಾಗುವುದು ಎಂದು ಕುಲಪತಿಗಳು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಳಾರಿಯ ಎನ್‌ಸಿಸಿ ಬಟಾಲಿಯನ್ ಎನ್ ಬಿ ಸುಬೇದಾರ್ ಹರಿಂದರ್ ಸಿಂಗ್ ಅವರು ಮಾತನಾಡಿ, ವಿಶ್ವದಲ್ಲಿಯೇ ಬೃಹತ್ ಸಂವಿಧಾನ ನಮ್ಮದು. ಎಲ್ಲ ಧರ್ಮಗಳಿಗೂ ಸಂವಿಧಾನದಲ್ಲಿ ಸಮಾನ ಸ್ಥಾನಮಾನ ನೀಡಲಾಗಿದೆ. ವಿವಿಯ ವಿದ್ಯಾರ್ಥಿಗಳು ಎನ್‌ಸಿಸಿ ಘಟಕಗಳಿಗೆ ಸೇರಿ ನಿಗದಿತ ಪ್ರಮಾಣಪತ್ರಗಳನ್ನು ಪಡೆದುಕೊಂಡು ಸರ್ಕಾರಿ ಹುದ್ದೆಗಳಲ್ಲಿ ಮೀಸಲಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಗಣರಾಜ್ಯೋತ್ಸವ ದಿನದಂದು ವಿವಿಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ವ್ಯಾಯಾಮ ಕೇಂದ್ರಗಳು (ಜಿಮ್) ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ.ಜೆ ಅತಿಥಿಗಳನ್ನು ಸ್ವಾಗತಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ಎಂ ಸಾಲಿ, ಸಿಂಡಿಕೇಟ್ ಸದಸ್ಯರಾದ ರಮೇಶ್ ಸವದಿ, ಶಿವಕುಮಾರ್, ಕ್ರೀಡಾ ವಿಭಾಗದ ನಿರ್ದೇಶಕ ಡಾ.ಶಶಿಧರ್ ಕೆಲ್ಲೂರ್ ವೇದಿಕೆಯಲ್ಲಿದ್ದರು.
ವಿವಿಯ ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು
WhatsApp Group Join Now
Telegram Group Join Now
Share This Article