ಎಸ್ಸೆಸ್ಸೆಲ್ಸಿ ಪರೀಕ್ಷೆ : ಇಂಗ್ಲಿಷ್, ಕನ್ನಡ ಭಾಷಾ ಪರೀಕ್ಷೆ ಸುಗಮ

Ravi Talawar
ಎಸ್ಸೆಸ್ಸೆಲ್ಸಿ ಪರೀಕ್ಷೆ : ಇಂಗ್ಲಿಷ್, ಕನ್ನಡ ಭಾಷಾ ಪರೀಕ್ಷೆ ಸುಗಮ
WhatsApp Group Join Now
Telegram Group Join Now
ಹೊಸಪೇಟೆ (ವಿಜಯನಗರ) ಏಪ್ರೀಲ್ 06 : ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ವಿವಿಧೆಡೆ ಇರುವ ಒಟ್ಟು 65 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಯ ಇಂಗ್ಲಿಷ್ ಮತ್ತು ಕನ್ನಡ ಭಾಷಾ ವಿಷಯದ ಪರೀಕ್ಷೆಗಳು ಏಪ್ರೀಲ್ 6ರಂದು ಸುಗಮವಾಗಿ ನಡೆದವು.
ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2,769, ಹೊಸಪೇಟೆ ತಾಲೂಕಿನಲ್ಲಿ 5,721, ಹೂವಿನಹಡಗಲಿ ತಾಲೂಕಿನಲ್ಲಿ 2,919, ಕೂಡ್ಲಿಗಿ ತಾಲೂಕಿನಲ್ಲಿ 4,638 ಹಾಗೂ ಹರಪನಹಳ್ಳಿ ತಾಲ್ಲೂಕಿನಲ್ಲಿ 4,111 ಸೇರಿ ಒಟ್ಟು 20,158 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 331 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಯುವರಾಜ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article