ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Ravi Talawar
ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
WhatsApp Group Join Now
Telegram Group Join Now

ನವದೆಹಲಿ,ಏಪ್ರಿಲ್ 18: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದನಕ್ಕೀಡಾಗಿರುವ ದೆಹಲಿ ಮಾಜಿ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ.

ದೆಹಲಿ ಅಬಕಾರಿ ನೀತಿಯಲ್ಲಿ  ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ಮನೀಶ್ ಸಿಸೋಡಿಯಾ ಪರ ವಾದ ಮಂಡಿಸಿದ ವಕೀಲ ಮೋಹಿತ್ ಮಾಥುರ್, ‘ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ ಎಂದು ಹೇಳಿದರು. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿದ ಅವರು, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ. ಹೀಗಾಗಿ ಅವರಿಗೂ ಜಾಮೀನು ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ಏಪ್ರಿಲ್ 26ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಏಪ್ರಿಲ್ 26 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು.

 

 

WhatsApp Group Join Now
Telegram Group Join Now
Share This Article