ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ ಬಗ್ಗೆ ಮಹಿಳಾ ಆಯೋಗ ಮಾಹಿತಿ

Ravi Talawar
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ ಬಗ್ಗೆ ಮಹಿಳಾ ಆಯೋಗ ಮಾಹಿತಿ
WhatsApp Group Join Now
Telegram Group Join Now

ನವದೆಹಲಿ, ಮೇ 09: ಹಾಸನ ಪೆನ್​ಡ್ರೈವ್ ಪ್ರಕರಣವನ್ನು ಎಸ್​ಐಟಿಗೆ ವಹಿಸಿದ್ದು, ಈಗಾಗಲೇ ಎಸ್​ಐಟಿ ತನಿಖೆ ನಡೆಸಿದ್ದು ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಇದರ ಮಧ್ಯೆ ಕೊನೆಗೂ ರಾಷ್ಟ್ರೀಯ ಮಹಿಳಾ ಆಯೋಗ   ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ NCW ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.

ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣದ ಬಗ್ಗೆ ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ವಿವರವಾದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸಬೇಕು ಪತ್ರದಲ್ಲಿ ಉಲ್ಲೇಖಿಸಿದೆ.

WhatsApp Group Join Now
Telegram Group Join Now
Share This Article