ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇಮೇಲ್ : ನಗರದಲ್ಲಿ ಆತಂಕ

Sandeep Malannavar
ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇಮೇಲ್ : ನಗರದಲ್ಲಿ ಆತಂಕ
WhatsApp Group Join Now
Telegram Group Join Now
ಬೆಳಗಾವಿ : ಮಂಗವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಜಡ್ಜ್ (ಪಿಡಿಜೆ) ಅವರ ಇಮೇಲ್ಗೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದಿರುವುದಾಗಿ ತಿಳಿದುಬಂದಿದೆ. ಇಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಫುಲ್ ಅಲರ್ಟ್ ಘೋಷಿಸಲಾಯಿತು.
ತಕ್ಷಣವೇ ಬೆಳಗಾವಿ ಜಿಲ್ಲಾ ನ್ಯಾಯಾಲಯ ಆವರಣಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ತಂಡಗಳು ದೌಡಾಯಿಸಿ ಪರಿಶೀಲನೆ ನಡೆಸಿದವು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಿನ ಕ್ರಮ ಕೈಗೊಂಡರು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಎಲ್ಲಾ ಕೋರ್ಟ್ ಕಲಾಪಗಳನ್ನು ತಾತ್ಕಾಲಿಕವಾಗಿ ಬಂದ ಮಾಡಲಾಯಿತು. ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆವರಣದಿಂದ ಹೊರಗೆ ಬಂದು ನಿಂತು ಕೆಲಕಾಲ ಆತಂಕದಲ್ಲಿದ್ದರು.
ಘಟನೆ ಮಾರ್ಕೆಟ್ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಮೇಲ್ ಮೂಲ ಪತ್ತೆಗೆ ಮುಂದಾಗಿದ್ದಾರೆ.
ಪರಿಶೀಲನೆ ವೇಳೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
WhatsApp Group Join Now
Telegram Group Join Now
Share This Article