ರೈತ ವಿದ್ಯಾನಿಧಿ, ರೈತ ಸಮ್ಮಾನ್ ನಿಲ್ಲಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರ: ಎ ಎಸ್ ಪಾಟೀಲ 

Ravi Talawar
ರೈತ ವಿದ್ಯಾನಿಧಿ, ರೈತ ಸಮ್ಮಾನ್ ನಿಲ್ಲಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರ: ಎ ಎಸ್ ಪಾಟೀಲ 
WhatsApp Group Join Now
Telegram Group Join Now
ಬೆಳಗಾವಿ: ಕಳೆದ ಎರಡು ವರ್ಷದಿಂದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ “ರೈತ ವಿದ್ಯಾನಿಧಿ” ನಿಲ್ಲಿಸಿದೆ. 52 ಲಕ್ಷ ರೈತರಿಗೆ ಬಿಜೆಪಿ ಸರ್ಕಾರ ನೀಡುತ್ತಿದ್ದ 4000 ರೂಪಾಯಿ ಕಿಸಾನ್
ಸಮ್ಮಾನ್ ನಿಧಿಯನ್ನು ನಿಲ್ಲಿಸಿದೆ. ರೈತರ ಕೃಷಿ ಪಂಪ್‌ಸೆಟ್‌ಗೆ ಟ್ರಾನ್ಸ್‌ಪಾರ್ಮರ್ ಅಳವಡಿಸಲು ಬಿಜೆಪಿಸರ್ಕಾರದಲ್ಲಿ 25000 ರೂ ನಿಗಧಿಪಡಿಸಿತ್ತು. ಆದರೆ ಇಂದಿನ ಭ್ರಷ್ಟ ಕಾಂಗ್ರೆಸ್
ಸರ್ಕಾರದಲ್ಲಿ ಒಂದು ಪಂಪ್‌ಸೆಟ್‌ಗೆ ಟ್ರಾನ್ಸ್ಪಾರ್ಮರ್ ಅಳವಡಿಸಲು 3 ಲಕ್ಷರೂ ನೀಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ( ನಡಹಳ್ಳಿ ) ಹೇಳಿದರು.
      ಅವರು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಸಿಸಿ ಮಾತನಾಡಿ  ಕರ್ನಾಟಕದಲ್ಲಿ ಬಿತ್ತನೆ ಬೀಜದ ಮೇಲಿನ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆಶೇ.20 ರಷ್ಟು ಏರಿಕೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೀಡಿದ 3454 ಕೋಟಿ ರೂಅನುದಾನದಲ್ಲಿ ನಯಾಪೈಸೆಯನ್ನು ರಾಜ್ಯದ ರೈತರಿಗೆ ತಲುಪಿಸದೆ ಲೂಟಿಹೊಡೆದಿದ್ದಾರೆ.ಕರ್ನಾಟಕ ರಾಜ್ಯಕ್ಕೆ ಯುರಿಯಾ ರಸಗೊಬ್ಬರವು 6.30 ಲಕ್ಷ ಮೆಟ್ರಿಕ್ ಟನ್
ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ರಸಗೊಬ್ಬರವನ್ನು ಅವಶ್ಯಕತೆಗಿಂತ ಹೆಚ್ಚಿಗೆ ಕರ್ನಾಟಕಕ್ಕೆ ನೀಡಿರುತ್ತದೆ. ಉಳಿದ2.43 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ರಾಜ್ಯದ ರೈತರಿಗೆ ನೀಡದೆ
ಕಾಳಸಂತೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾರಾಟ ಮಾಡುತ್ತಿದೆಯೇ? ಕಳೆದ 2 ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 3400ಕ್ಕಿಂತ ಅಧಿಕರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 ಭೂ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ10000 ರೂ ನೀಡುವ ಪ್ರೋತ್ಸಾಹಧನವನ್ನು ನಿಲ್ಲಿಸಿದ್ದಾರೆ.ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನವನ್ನು ಕಾಂಗ್ರೆಸ್ ಸರ್ಕಾರಬಾಕಿ ಉಳಿಸಿಕೊಂಡಿದೆ. ಹಾವೇರಿ ಮತ್ತು ರಾಣಿಬೆನ್ನೂರಿನಲ್ಲಿ ರಸಗೊಬ್ಬರ ಖರೀದಿಸಲು ಮುಂದಾಗಿದ್ದರೈತರಿಗೆ ಪೊಲೀಸರು ಲಾಟಿ ಚಾರ್ಜ್ ಮಾಡಿರುವುದನ್ನು ಬಿಜೆಪಿಯುತೀವ್ರವಾಗಿ ಖಂಡಿಸುತ್ತದೆ. ಕರ್ನಾಟಕ ರಾಜ್ಯದಲ್ಲಿ ರಸಗೊಬ್ಬರದ ಅವೈಜ್ಞಾನಿಕವಾಗಿ ದಾಸ್ತಾನು ಶೇಖರಣೆಮಾಡಿರುವ ಪರಿಣಾಮವಾಗಿ ಕರ್ನಾಟಕ ಎಲ್ಲ ಜಿಲ್ಲಾದ್ಯಂತ ರಸಗೊಬ್ಬರದಅಭಾವ ಉಂಟಾಗಿ ರೈತರು ಸಂಕಷ್ಟದಲ್ಲಿದ್ದಾರೆ.ಕೊಪ್ಪಳದಲ್ಲಿ ರೈತನೊಬ್ಬ ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ರೈತರ ಶಾಪ ಸರ್ಕಾರಕ್ಕೆ ತಟ್ಟದೇ ಇರದು.ರಾಜ್ಯ ಸರ್ಕಾರದ ಕೃಷಿ ಸಚಿವರು ಮತ್ತು ಇಲಾಖೆ ಸಂಪೂರ್ಣನಿಷ್ಕ್ರಿಯರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ( ನಡಹಳ್ಳಿ )  ಹೇಳಿದರು.
        ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ್ ಪಾಟೀಲ,ಮಹಾಂತೇಶ ದೊಡ್ಡಗೌಡ್ರ, ಡಾ|| ವಿಶ್ವನಾಥ್ ಪಾಟೀಲ, ಬಿಜೆಪಿ ಮುಖಂಡರಾದ ಎಂ.ಬಿ.ಜಿರಲಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಜಗದೀಶ್ ಬೂದಿಹಾಳ, ಕಲ್ಲಪ್ಪ ಶಹಾಪೂರಕರ,ರಾಜಕುಮಾರ ಹರಗಾಪೂರ, ಈರಣ್ಣ ವಾರದ, ಸಚಿನ್ ಕಡಿ , ಬಿಜೆಪಿ ಜಿಲ್ಲಾ, ತಾಲೂಕಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
One attachment • Scanned by Gmail

WhatsApp Group Join Now
Telegram Group Join Now
Share This Article