ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ; ರೈತರು ಕಂಗಾಲ

Ravi Talawar
ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ; ರೈತರು ಕಂಗಾಲ
WhatsApp Group Join Now
Telegram Group Join Now

ಗದಗ; ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದ್ದು ರೈತರು ಕಂಗಾಲಾಗಿದ್ದಾರೆ. ದರ ಕುಸಿತಕ್ಕೆ ಗದಗ ಎಪಿಎಂಸಿಯಲ್ಲಿ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ದರಗಳು ಏರಿಕೆಯಾದರೂ ರೈತರು ಬೆಳೆದ ಬೆಳೆಗಳ ದರ ಏಕೆ ಏರಿಕೆಯಾಗುತ್ತಿಲ್ಲ ಅಂತ ಕಿಡಿಕಾರಿದ್ದಾರೆ.

ಮಾರುಕಟ್ಟೆಗೆ ಹೆಚ್ಚು ಫಸಲು ಬಂದಿದ್ದರಿಂದ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 25 ಕೆಜಿ ಟ್ರೇ ಕೇವಲ 50 ರೂ. ಮಾರಾಟವಾಗುತ್ತಿದೆ. ಮಾರುಕಟ್ಟೆಯಲ್ಲಿ 20-30 ರೂ. ಕೆಜಿ ಟೊಮೆಟೊ ಮಾರಾಟವಾಗುತ್ತಿದ್ದರು, ರೈತರಿಗೆ ಕೆಜಿ ಕೇವಲ 2 ರೂ. ಸಿಗುತ್ತಿದೆ. ರೈತರಿಗಾಗುತ್ತಿರುವ ಈ ಅನ್ಯಾಯ ತಿಳಿದಿದ್ದರೂ ಎಪಿಎಂಸಿ ಅಧಿಕಾರಿಗಳು ಮೌನವಾಗಿದ್ದಾರೆ.

ಬದನೆಕಾಯಿ, ನುಗ್ಗೆಕಾಯಿ ಬೆಲೆಯೂ ಕುಸಿತವಾಗಿದೆ. ಒಂದು ಟ್ರೇ ಬದನೆಕಾಯಿಗೆ 50 ರಿಂದ 80 ರೂ ಬೆಲೆ ಇದೆ. ನುಗ್ಗೆಕಾಯಿ ಒಂದು ಕೆಜಿಗೆ 10 ರೂ ಮಾರಾಟವಾಗುತ್ತಿದೆ. ಇನ್ನು ಒಂದು ಟ್ರೇ ಟೊಮೆಟೊ ಮಾರುಕಟ್ಟೆಯಲ್ಲಿ 50 ರೂ. ಮಾರಾಟವಾಗುತ್ತಿದೆ. ರೈತರು ಎಕರೆಗೆ 30-50 ಸಾವಿರ ರೂ ಮಾಡಿರುವ ಖರ್ಚು ಕೂಡ ವಾಪಸ್ ಬರಿತ್ತಿಲ್ಲ.

ಒಂದು ಟ್ರೇ ನಲ್ಲಿ ಸುಮಾರು 20-25 ಕೆಜಿ ಟೊಮೆಟೊ ಇರುತ್ತೆ. 2 ರೂ ಕೆಜಿಯಂತೆ ಟೊಮೆಟೊ ಮಾರಾಟವಾಗುತ್ತಿದ್ದು, ಸರ್ಕಾರ ಹಾಗೂ ಎಪಿಎಂಸಿ ವರ್ತಕರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಗೆ ಕ್ವಿಂಟಾಲ್​ಗಟ್ಟಲೇ ಟೊಮೆಟೊ ತಂದರೂ ರೈತರ ಕೈ ಖಾಲಿ ಖಾಲಿ ಆಗಿದೆ.

ಟೊಮೆಟೊ ಕಟಾವು ಮಾಡುವ ಕಾರ್ಮಿಕರಿಗೆ 300 ರೂ ದಿನ ಕೂಲಿ ಕೊಡಬೇಕು. ಮಾರುಕಟ್ಟೆಗೆ ಒಂದು ಟ್ರೇ ಹೇರಿಕೊಂಡು ಬಂದರೆ 30 ರೂ. ವಾಹನ ಬಾಡಿಗೆ ಇದೆ. ಜೊತೆಗೆ ದಲ್ಲಾಳಿಗೆ 10 ರೂ. ಕೊಡಬೇಕು. ಹಾಗಾಗಿ ಒಂದು ಟ್ರೇ ಗೆ ರೈತರಿಗೆ 10 ರೂ ಮಾತ್ರ ಸಿಗುತ್ತದೆ ಎಂದು ಕಿಡಿಕಾರಿದ್ದಾರೆ. ಆ 10 ರೂ ಟೀ, ತಿಂಡಿ ಮಾಡಿದರೆ ಖಾಲಿ ಕೈಯಲ್ಲಿ ಮನೆಗೆ ಹೋಗಬೇಕಾಗುತ್ತೆ ಎಂದು ಗೋಳಾಡಿದರು.

 

WhatsApp Group Join Now
Telegram Group Join Now
Share This Article