ಯರಗಟ್ಟಿ: ಪ್ರತಿ ಟನ್ ಕಬ್ಬಿಗೆ ?೩,೫೦೦ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತಿದಲ್ಲಿ ಬೆಳಗಾವಿಬಾಗಲಕೋಟೆ, ಗೋಕಾಕ-ಸವದತ್ತಿ ರಾಜ್ಯ ಹೆದ್ದಾರಿ ತಡೆದು ಭಾನುವಾರ ಪ್ರತಿಭಟಿಸಿದ ರೈತರು.
ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ರೈತರು, ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಾಸಿಗೂ ಹೆಚ್ಚು ಹೊತ್ತು ರಸ್ತೆತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ ಮಾತನಾಡಿದ ಅವರು ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ ?೩,೫೦೦ ನೀಡಬೇಕು ಎಂದು ಒತ್ತಾಯಿಸಿ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಅದನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕು ಕೇಂದ್ರದ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.
ನ್ಯಾಯಯುತವಾದ ದರ ಸಿಗದೆ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವಿಗೆ ಧಾವಿಸಬೇಕಿದ್ದ ಜಿಲ್ಲಾಡಳಿತ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ನಮ್ಮ ಬೇಡಿಕೆಯಂತೆ ಪ್ಯಾಕ್ಟರಿ ಮಾಲಕರು ಕಬ್ಬಿಗೆ ದರ ನಿಗದಿಪಡಿಸಬೇಕು. ಬಳಿಕ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು ಎಂದು ಒತ್ತಾಯಿಸಿದರು.
ನಂತರ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಹಾಗೂ ಸಿಪಿಐ ಆಯ್ ಎಂ ಮಠಪತಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದರು.ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಯಲ್ಲನಾಯ್ಕ ನಾಯ್ಕರ, ಶಂಕರ ಬಗನಾಳ, ಮಾಯಪ್ಪ ಜಿಂಗಿ, ಸೋಮು ರೈನಾಪೂರ ಇತರರಿದ್ದರು.


