ಧಾರವಾಡ: ಕಬ್ಬು ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಿ ಹಾಗೂ ಬಾಕಿ ಬಿಲ್ ಪಾವತಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎಚ್ಚೆತ್ತು ರೈತರಿಗೆ ನ್ಯಾಯ ಒದಗಿಸಬೇಕು. ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಿ, ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವೀರಣ್ಣ ಬಳಿಗೇರ, ನಾಗಪ್ಪ ಉಂಡಿ, ಮಾಬೂಲಿ ಗಾಟಿನ್, ಮಡಿವಾಳಪ್ಪ ಯಾಬಣ್ಣವರ, ನಾಗಪ್ಪ ಕರಿಲಿಂಗಣ್ಣವರ, ಶಾಂತು ದಿಂಡಲಕೋಪ್ಪ ಸೇರಿದಂತೆ ಇತರರಿದ್ದರು.


