ಮಂಡ್ಯ, ಮೇ 06: ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಗರ್ಭಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕರಾಳ ದಂಧೆ ಬಯಲಾಗಿತ್ತು. ಆಲೆಮನೆ ಮಾತ್ರವಲ್ಲದೆ ಸ್ಕ್ಯಾನಿಂಗ್ ಸೆಂಟರ್ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ ಕೃತ್ಯ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ತಪಾಸಣೆ ವೇಳೆ ಅಂಥ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿದ್ದವು.