ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೊಡೆದಾಟ

Ravi Talawar
ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೊಡೆದಾಟ
WhatsApp Group Join Now
Telegram Group Join Now

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟವೇ ನಡೆಯಿತು.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದರು.

WhatsApp Group Join Now
Telegram Group Join Now
Share This Article