ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ

Ravi Talawar
ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ
WhatsApp Group Join Now
Telegram Group Join Now

ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರದ ಅತಿ ಪ್ರಮುಖ ಆಧಾರ ಸ್ತಂಭಗಳಾಗಿರುವ ತೆಲುಗು ದೇಶಂ ಪಕ್ಷ ಮತ್ತು ಜನತಾ ದಳ ಸಂಯುಕ್ತ  ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ.

ಮಂಗಳವಾರ ಸಂಸತ್‌ನಲ್ಲಿ ತಮ್ಮ ಸತತ ಏಳನೇ ಬಜೆಟ್ ಮಂಡಿಸಿದ ಅವರು, ಬಿಜೆಪಿ ಮಿತ್ರ ಪಕ್ಷಗಳ ಬೇಡಿಕೆಗಳನ್ನು ತಣಿಸುವ ಮೂಲಕ ಅವುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಜೆಡಿಯ ನಾಯಕ ನಿತೀಶ್ ಕುಮಾರ್ ಆಡಳಿತವಿರುವ ಬಿಹಾರ ಸರ್ಕಾರದ ಬೇಡಿಕೆಯಾದ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳಿಂದ ಬಾಹ್ಯ ನೆರವನ್ನು ಈಡೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 26 ಸಾವಿರ ಕೋಟಿ ರೂ ಹಂಚಿಕೆ ಮಾಡಲಾಗುವುದು.

ಆಂಧ್ರಪ್ರದೇಶಕ್ಕೆ ವಿಶೇಷ ಆರ್ಥಿಕ ನೆರವನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ, ವಿಶೇಷ ರಾಜ್ಯ ಸ್ಥಾನಮಾನಕ್ಕೆ ಬೇಡಿಕೆ ಇರಿಸಿತ್ತು. ಆದರೆ ಅದನ್ನು ಈಡೇರಿಸದೆ ಇದ್ದರೂ, ಅದಕ್ಕೆ ಪೂರಕವಾದ ಆರ್ಥಿಕ ನೆರವು ಪ್ರಕಟಿಸಲಾಗಿದೆ.

ಆಂಧ್ರಪ್ರದೇಶದ ಮರು ಸಂಘಟನಾ ಕಾಯ್ದೆಯ ಭರವಸೆಗಳನ್ನು ಈಡೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ಹೊಸ ರಾಜಧಾನಿಯ ನಿರ್ಮಾಣಕ್ಕಾಗಿ ಕಾಯ್ದೆ ಅಡಿ 15 ಸಾವಿರ ಕೋಟಿ ರೂ ಅನುದಾನವನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಬಿಡುಗಡೆ ಮಾಡಲಾಗುವುದು. ಮುಂಬರುವ ವರ್ಷಗಳಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಬಹುಪಕ್ಷೀಯ ಸಂಸ್ಥೆಗಳ ಮೂಲಕ ವಿಶೇಷ ಆರ್ಥಿಕ ಬೆಂಬಲ ಒದಗಿಸಲಾಗುವುದು ಎಂದು ನಿರ್ಮಲಾ ತಿಳಿಸಿದರು.

ಪೊಲ್ಲಾವರಂ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಹಾಗೂ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

 

WhatsApp Group Join Now
Telegram Group Join Now
Share This Article