ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್

Ravi Talawar
ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್
WhatsApp Group Join Now
Telegram Group Join Now

ಬೆಂಗಳೂರು: ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್​ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

WhatsApp Group Join Now
Telegram Group Join Now
Share This Article