ಸಿದ್ದರಾಮಯ್ಯನವರ ವಿರುದ್ಧ ನಿಂದನೆ ಪೋಸ್ಟ್‌: ಹಲವರ ವಿರುದ್ಧ ಎಫ್‌ಐಆರ್‌

Ravi Talawar
ಸಿದ್ದರಾಮಯ್ಯನವರ ವಿರುದ್ಧ ನಿಂದನೆ ಪೋಸ್ಟ್‌: ಹಲವರ ವಿರುದ್ಧ ಎಫ್‌ಐಆರ್‌
WhatsApp Group Join Now
Telegram Group Join Now

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಲವರ ವಿರುದ್ದ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಕುರಿತು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ರಪಂದು ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ -2) ರಾಜಾ ಇಮಾಮ್ ಖಾಸಿಂ ಅವರು ಹೇಳಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು. ಬಳಿಕ ನಾನು ಕನ್ನಡದಲ್ಲೇ ಮಾತನಾಡುತ್ತೇನೆಂದು ಭಾಷಣ ಮಾಡಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಷ್ಟ್ರಪತಿಗಳಿಗೆ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆಂದು ಹಲವರು ಟೀಕೆಗಳನ್ನು ಮಾಡುತ್ತಿದ್ದಾರೆ

WhatsApp Group Join Now
Telegram Group Join Now
Share This Article