ಸಿಟಿ ರವಿ ಬಂಧನ ವಿರೋಧಿಸಿ ಪ್ರತಿಭಟಿಸಿದ್ದ ಬಿಜೆಪಿಗರ ವಿರುದ್ಧ ಎಫ್​ಐಆರ್​

Ravi Talawar
ಸಿಟಿ ರವಿ ಬಂಧನ ವಿರೋಧಿಸಿ ಪ್ರತಿಭಟಿಸಿದ್ದ ಬಿಜೆಪಿಗರ ವಿರುದ್ಧ ಎಫ್​ಐಆರ್​
WhatsApp Group Join Now
Telegram Group Join Now

ಚಿಕ್ಕಮಗಳೂರು, ಡಿಸೆಂಬರ್​ 21: ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ‌ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.

ಗುರುವಾರ ಮಧ್ಯಾಹ್ನ ವಿಧಾನ ಪರಿಷತ್​ ಗದ್ದಲದಿಂದ ಕೂಡಿತ್ತು. ಆಡಳಿತ ಮತ್ತು ವಿರೋಧ ಪಕ್ಷದವರ ನಡುವೆ ವಾಗ್ಯುದ್ಧ ನಡೆದಿತ್ತು. ವಾಗ್ವಾದದ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ​ ಎಂಎಲ್​ಸಿ ಸಿಟಿ ರವಿ ಅವರಿಗೆ ಕೊಲೆಗಾರ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಟಿ ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಅಶ್ಲೀಲ ಪದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
WhatsApp Group Join Now
Telegram Group Join Now
Share This Article