ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ

Hasiru Kranti
ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ
WhatsApp Group Join Now
Telegram Group Join Now

ಮುಂಬೈ ಏ., ೧೪- ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಇಂದು ನಸುಕಿನ ಜಾವ ೫ ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮುಂಬಯಿನ ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೆಳಗಿನ ಜಾವ ಅಪರಿಚಿತರಿಬ್ಬರು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಇಬ್ಬರು ಅಪರಿಚಿತ ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತಿನ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದರಲ್ಲಿ ಯಾರು ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯಿಂದ ಎಚ್ಚೆತ್ತಿರುವ ಪೊಲೀಸರು ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಿದ್ದಾರೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಅಲ್ಲದೆ ವಿಧಿವಿಜ್ಞಾನ ತಂಡವೂ ಸಹ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆಗಳನ್ನು ಹಾಕಿದ್ದ. ೨೦೨೩ ರಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ. ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದ.

ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್?ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೇಳಿದ್ದರು.

 

WhatsApp Group Join Now
Telegram Group Join Now
Share This Article