5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

Ravi Talawar
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್
WhatsApp Group Join Now
Telegram Group Join Now
ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.
ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್​​​ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್​ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಾಯದಿಂದ ಪಾರಾದ ಮಗು: ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಸದ್ಯ ಅಪಾಯದಿಂದ ಪಾರಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಜನವರಿ 13ರ ಸೋಮವಾರದಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆರೋಪಿ ಮಂಜುನಾಥ ಬಾಲಕಿಯನ್ನು ಹೊಂಚು ಹಾಕಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದುದು ಮತ್ತು ಆತನ ಚಲನವಲದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು.
ಬಾಲಕಿಯನ್ನು ಕರೆದುಕೊಂಡು ಹೋಗುವ ಮುನ್ನ ಆರೋಪಿ ಬಾರ್‌ನಲ್ಲಿ ಮದ್ಯಪಾನ ಮಾಡಿದ್ದ. ಕುಡಿದ ಮತ್ತಿನಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ಆರೋಪಿ ಹುಡುಕಾಟಕ್ಕೆ ಬಳ್ಳಾರಿ ಎಸ್​​ಪಿ ಮೂರು ಪೊಲೀಸ್ ತಂಡ ರಚನೆ ಮಾಡಿದ್ದರು.
ವಿಜಯನಗರ ಜಿಲ್ಲೆ ಕಮಲಾಪುರ ಮೂಲದ ಆರೋಪಿ ಮಂಜುನಾಥನನ್ನು ಬುಧವಾರ ಕೊಪ್ಪಳದ ಹುಲಿಗಿಯಲ್ಲಿ ಬಂಧಸಲಾಗಿತ್ತು. ಗುರುವಾರ ಬೆಳಿಗ್ಗೆ ತೋರಣಗಲ್‌ನಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಪೊಲೀಸರು ಕರೆ ತಂದಿದ್ದರು. ಈ ವೇಳೆ ಆತ ತಪ್ಪಿಕೊಳ್ಳಲು ಯತ್ನಿಸಿದ್ದ. ಅಲ್ಲದೆ, ಸ್ಥಳದಲ್ಲಿದ್ದ ಇತರ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article