ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 03 ರಂದು ಪಂಜಿನ ಮೆರವಣಿಗೆ, ಮೇ 04 ರಂದು ಸಾಂಸ್ಕøತಿಕ ಕಾರ್ಯಕ್ರಮ

Ravi Talawar
ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 03 ರಂದು ಪಂಜಿನ ಮೆರವಣಿಗೆ, ಮೇ 04 ರಂದು ಸಾಂಸ್ಕøತಿಕ ಕಾರ್ಯಕ್ರಮ
WhatsApp Group Join Now
Telegram Group Join Now


ಬಳ್ಳಾರಿ,ಮೇ 02 ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣ ಹೆಚ್ಚಳ ಹಾಗೂ ನೈತಿಕ ಮತದಾನದ ಕುರಿತು ಅರಿವು ಮೂಡಿಸಲು ಮೇ 03 ರಂದು ಸಂಜೆ 07 ಗಂಟೆಗೆ ಮಹಾನಗರ ಪಾಲಿಕೆ ಕಚೇರಿ ಆವರಣದಿಂದ ಪಂಜಿನ ಮೆರವಣಿಗೆ ಏರ್ಪಡಿಸಲಾಗಿದೆ.
ಪಂಜಿನ ಮೆರವಣಿಗೆಯು ಮಹಾನಗರ ಪಾಲಿಕೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಬೆಂಗಳೂರು ರಸ್ತೆ, ಬ್ರೂಸ್‍ಪೇಟೆ ಪೊಲೀಸ್ ಠಾಣೆ ಮುಂಭಾಗದಿಂದ ಹೆಚ್.ಆರ್.ಗವಿಯಪ್ಪ ವೃತ್ತದವರೆಗೂ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣ ಹೆಚ್ಚಳ ಹಾಗೂ ಮತದಾನ ಜಾಗೃತಿಗಾಗಿ ಮೇ 04 ರಂದು ಸಂಜೆ 06 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article