ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!

Ravi Talawar
ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 21: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ. ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.

ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.

WhatsApp Group Join Now
Telegram Group Join Now
Share This Article